ಬೆಂಗಳೂರು: ಬಿಜೆಪಿ ಸರ್ಕಾರದ (BJP Government) ಕೋವಿಡ್ ಅಕ್ರಮಗಳ (Covid Corruption) ತನಿಖೆಗೆ ನಿವೃತ್ತ ನ್ಯಾಯಾಧೀಶ ಮೈಕೆಲ್ ಡಿ ಕುನ್ಹಾ (Michel D Kunha) ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು (Enquiry Commission) ಸರ್ಕಾರ ರಚಿಸಿದೆ.
ಮೂರು ತಿಂಗಳೊಳಗೆ ವರದಿ ಕೊಡಲು ಆಯೋಗಕ್ಕೆ ಒಳಾಡಳಿತ ಇಲಾಖೆ (ಕಾನೂನು ಮತ್ತು ಸುವ್ಯವಸ್ಥೆ) ಮಹತ್ವದ ಆದೇಶ ನೀಡಿದೆ. ಇದನ್ನೂ ಓದಿ: ಕಣ್ಣೀರು ಹಾಕಬಾರದು ಅಂತ ನಿರ್ಧಾರ ಮಾಡ್ಕೊಂಡು ಬಂದಿದ್ದೀನಿ: ರಾಘು ಭಾವುಕ
ಕೋವಿಡ್ ಕಾಲದ ಅಕ್ರಮಗಳ ಬಗ್ಗೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಹಲವು ಆರೋಪಗಳನ್ನು ಮಾಡಿತ್ತು. ಲೆಕ್ಕಪತ್ರಗಳ ಸಮಿತಿ ಮಾಡಿದ್ದ ಆರೋಪಗಳ ತನಿಖೆ ನಡೆಸುವಂತೆ ಆಯೋಗಕ್ಕೆ ಸೂಚನೆ ನೀಡಿದೆ.
ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ ಸೇರಿದಂತೆ ಔಷಧ ಖರೀದಿ, ವೈದ್ಯಕೀಯ ಉಪಕರಣಗಳ ಖರೀದಿ, ಬೆಡ್ ಹಂಚಿಕೆ ಅಕ್ರಮ ಆರೋಪಗಳ ಬಗ್ಗೆ ಸಮಿತಿ ತನಿಖೆ ನಡೆಸಲಿದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]