ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗವು 2015ರಲ್ಲಿ ನಡೆಸಿದ್ದ ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ (ಜಾತಿವಾರು ಜನಗಣತಿ) ವರದಿ ರಾಜ್ಯ ಸರ್ಕಾರಕ್ಕೆ ಅಧಿಕೃತವಾಗಿ ಸಲ್ಲಿಕೆಯಾಗಿದೆ.
ರಾಜ್ಯದ ಎಲ್ಲ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಯನ್ನು ಅರಿಯಲು 158.47 ಕೋಟಿ ರೂ. ವೆಚ್ಚದಲ್ಲಿ ಹೆಚ್. ಕಾಂತರಾಜ (Kantharaju) ನೇತೃತ್ವದ ಹಿಂದುಳಿದ ವರ್ಗಗಳ ಆಯೋಗವು 2015ರಲ್ಲಿ ಸಮೀಕ್ಷೆ (Socio-Economic Survey) ನಡೆಸಿತ್ತು. ಈ ಆಯೋಗದ ಅವಧಿ ಮುಕ್ತಾಯದ ಸಂದರ್ಭದಲ್ಲಿ ವರದಿಯನ್ನು ಅಧಿಕೃತವಾಗಿ ಸರ್ಕಾರಕ್ಕೆ ಸಲ್ಲಿಸಿರಲಿಲ್ಲ.
Advertisement
ಕೆ. ಜಯಪ್ರಕಾಶ್ ಹೆಗ್ಡೆ (Jayaprakash Hegde) ಅಧ್ಯಕ್ಷತೆಯ ಈಗಿನ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ವಿವಿಧ ವಿಷಯಕ್ಕೆ ಸಂಬಂಧಿಸಿದ ಟಿಪ್ಪಣಿಗಳೊಂದಿಗೆ 2015ರ ಸಮೀಕ್ಷಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ (CM Siddaramaiah) ಸಲ್ಲಿಸಿದೆ. ಇದನ್ನೂ ಓದಿ: BBMP Budget 2024: ಆಟದ ಮೈದಾನದ ಕೆಳಗೆ ಬರಲಿದೆ ಅಂಡರ್‌ಗ್ರೌಂಡ್ ಪಾರ್ಕಿಂಗ್!
Advertisement
Advertisement
ಜಾತಿ ಗಣತಿ ಉದ್ದೇಶ ಏನು?
1931ರ ಜನಗಣತಿಯ ನಂತರ ಯಾವುದೇ ಜನಗಣತಿ ದಾಖಲೆಗಳಿಂದ ಜಾತಿ / ಸಮುದಾಯವಾರು ಜನಸಂಖ್ಯೆಯ ಅಂಕಿ-ಅಂಶಗಳು ಖಚಿತವಾಗಿ ದೊರೆಯುತ್ತಿಲ್ಲ. ಜಾತಿವಾರು ಜನಗಣತಿ ಅಂಕಿ-ಅಂಶಗಳು ಲಭ್ಯವಿಲ್ಲದೇ ಇರುವುದರಿಂದ ಕಾರ್ಯಕ್ರಮಗಳ ಮುಖಾಂತರ ಸೌಲಭ್ಯಗಳನ್ನು ಸಾಮಾಜಿಕ ನ್ಯಾಯ ತತ್ವದ ಆಧಾರದ ಮೇಲೆ ಒದಗಿಸುವುದು ಸರ್ಕಾರಕ್ಕೆ ಕಷ್ಟವಾಗುತ್ತಿತ್ತು.
Advertisement
ಸಮುದಾಯಗಳ ಈಗಿರುವ ಸ್ಥಿತಿಗಳಿಗೆ ಸಂಬಂಧಿಸಿದಂತೆ ವೈಜ್ಞಾನಿಕವಾದ ವಿಶ್ಲೇಷಣೆ ನಡೆಸುವುದು, ಜನಸಂಖ್ಯೆಯ ಪ್ರಮಾಣವನ್ನು ತಿಳಿಯುವುದು ಅಗತ್ಯವಾಗಿದೆ ಎಂಬ ಉದ್ದೇಶಕ್ಕಾಗಿ ಆಗಿನ ಸಿದ್ದರಾಮಯ್ಯ ಸರ್ಕಾರ ಸಮೀಕ್ಷೆಗೆ ಆದೇಶಿಸಿತ್ತು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಜಾತಿಗಳು ಹಾಗೂ ಇತರ ಜಾತಿಗಳನ್ನೊಳಗೊಂಡಂತೆ ರಾಜ್ಯದ ಪ್ರತಿಯೊಂದು ಕುಟುಂಬದ ಸಮಗ್ರ ಸಮೀಕ್ಷೆಯನ್ನು ಕೈಗೊಂಡು ವಿವಿಧ ಜಾತಿಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಬಗ್ಗೆ ವಿಶ್ಲೇಷಣೆ ಮಾಡಿ, ಹಿಂದುಳಿದ ವರ್ಗಗಳ ಪಟ್ಟಿಯನ್ನು ಪರಿಷ್ಕರಿಸುವ ಕುರಿತು ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಜವಾಬ್ದಾರಿಯನ್ನು ಆಯೋಗಕ್ಕೆ ನೀಡಲಾಗಿತ್ತು. ರಾಜ್ಯದ ಎಲ್ಲ ವರ್ಗಗಳ / ಜಾತಿಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಔದ್ಯೋಗಿಕ ಸ್ಥಿತಿಗತಿಗಳ ಕುರಿತು ಸಮೀಕ್ಷೆ ಮುಖಾಂತರ ಸಮಗ್ರ ಅಂಕಿ-ಅಂಶಗಳನ್ನು ಸಂಗ್ರಹಣೆಗೆ ಸೂಚಿಸಲಾಗಿತ್ತು.