DistrictsKarnatakaLatestNationalTumakuru

ಕನ್ನಡತಿ ಸೂಲಗಿತ್ತಿ ನರಸಮ್ಮಗೆ ಪದ್ಮ ಪ್ರಶಸ್ತಿ ಗೌರವ

ನವದೆಹಲಿ: ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ದೇಶದ ಉನ್ನತ ನಾಗರಿಕ ಪದ್ಮ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಕನ್ನಡತಿ ಸೂಲಗಿತ್ತಿ ನರಸಮ್ಮ ಅವರು ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದಾರೆ.


ಮೂಲತಃ ತುಮಕೂರು ಜಿಲ್ಲೆ ಯ ಪಾವಗಡ ತಾಲೂಕು ಕೃಷ್ಣಾಪುರದ ಮೂಲದವರಾದ ಸೂಲಗಿತ್ತಿ ನರಸಮ್ಮ ಆಸ್ಪತ್ರೆ, ವೈದ್ಯರಿಲ್ಲದ ಕಾಲದಲ್ಲಿ ಆಧುನಿಕ ಕಾಲದ ಹೆರಿಗೆ ತಜ್ಞೆಯಂತೆ 15,000ಕ್ಕೂ ಹೆಚ್ಚು ಹೆರಿಗೆ ಮಾಡಿಸಿದ್ದಾರೆ.

ಈ ಭಾಗದ ಜನರು ಸೂಲಗಿತ್ತಿ ನರಸಮ್ಮ ಅವರನ್ನು ದೇವರ ಸ್ವರೂಪದಂತೆ ಕಾಣುತ್ತಾರೆ. ಇವರ ಸೇವೆಯನ್ನು ಗುರುತಿಸಿರುವ ಹಲವು ಸಂಘ ಸಂಸ್ಥೆಗಳು ಈಗಾಗಲೇ ಹಲವು ಪ್ರಶಸ್ತಿಗಳು ನೀಡಿ ಗೌರವಿಸಿವೆ. ದೇವರಾಜು ಅರಸು ಪ್ರಶಸ್ತಿ, ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ, ವಯೋಶ್ರೇಷ್ಠ ಸಮ್ಮಾನ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿವೆ.

https://www.youtube.com/watch?v=EDUP6ymyTJ4

Leave a Reply

Your email address will not be published.

Back to top button