ವಿಜಯಪುರ: ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಜಯಪುರದ ಮೂವರು ಹಾಗೂ ವಿಜಯನಗರ 6 ವಿದ್ಯಾರ್ಥಿಗಳು 625 ಅಂಕಗಳನ್ನು ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.
ವಿದ್ಯಾಥಿಗಳು ಉತ್ತೀರ್ಣರಾದ ವಿಷಯ ತಿಳಿಯುತ್ತಿದ್ದಂತೆ ಶಾಲಾ ಆವರಣದಲ್ಲೇ ಪೋಷಕರು, ಗ್ರಾಮಸ್ಥರೊಂದಿಗೆ ಕುಣಿದು ಕುಪ್ಪಳಿಸಿದರು. ಇದನ್ನೂ ಓದಿ; ಕಿರಾಣಿ ಅಂಗಡಿ ನಡೆಸುತ್ತಿದ್ದ ಮಹಾಂತೇಶ್ ರಾಯರ್ ಪುತ್ರಿ ಬೆಳಗಾವಿಗೆ ಟಾಪ್
Advertisement
Advertisement
ವಿಜಯಪುರ ತಾಲೂಕಿನ ಜುಮನಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಅಮಿತ್ ಮಾದರ, ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಐಶ್ವರ್ಯ ಈರಣ್ಣ ಕನಸೆ, ಸಿಂದಗಿ ತಾಲೂಕಿನ ವಿಭೂತಿಹಾಳ ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಸ್ವಾತಿ ಗೌಡಪ್ಪ ಮಲ್ಲೇದ, ಇಟ್ಟಂಗಿಹಾಳ ಗ್ರಾಮದ ಪ್ರೌಢ ಶಾಲೆಯ ರಕ್ಷಿತಾ ಸುರೇಶ ಚಿನಿವಾರ, ತಾಳಿಕೋಟೆ ಪಟ್ಟಣದ ಸರ್ವಜ್ಞ ವಿದ್ಯಾಪೀಠ ಪ್ರೌಢ ಶಾಲೆಯ ಶ್ರೇಯಾ ದೇಸಾಯಿ, ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಸಾಸನೂರ ಗ್ರಾಮದ ವಿದ್ಯಾರ್ಥಿನಿ ಶ್ರೇಯಾ ಬಸವಂತ್ರಾಯ ದೇಸಾಯಿ ಹಾಗೂ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಗ್ರಾಮದ ಆಕ್ಸ್‌ಫರ್ಡ್ ಪ್ರೌಢ ಶಾಲೆಯ ಯಲ್ಲಾಲಿಂಗ ಬಸಪ್ಪ ಸುಳಿಭಾವಿ ಶೇ.100 ಪ್ರತಿಶತ ಅಂಕಗಳನ್ನು ಪಡೆದು ಪೋಷಕರು ಹಾಗೂ ಶಿಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇದನ್ನೂ ಓದಿ: ಔಟ್ ಆಫ್ ಔಟ್ – ಚಿಕ್ಕಬಳ್ಳಾಪುರದ ಒಂದೇ ಶಾಲೆಯ ಮೂವರು ರಾಜ್ಯಕ್ಕೆ ಪ್ರಥಮ
Advertisement
Advertisement
ವಿಜಯನಗರದ ಮೂವರಿಗೆ ಔಟ್ ಆಫ್ ಔಟ್: ಜಿಲ್ಲೆಯಲ್ಲಿ ಒಟ್ಟು ಮೂರು ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮಸ್ಥಾನ ಪಡೆದಿದ್ದಾರೆ. ಜಿಲ್ಲೆಯ ಹೂವಿನ ಹಡಗಲಿಯ, ಎಮ್.ಎಮ್.ಪಾಟೀಲ ಶಾಲೆಯ ವಿದ್ಯಾರ್ಥಿನಿ ಅಮೃತಾ, ಕೊಟ್ಟರು ನಗರದ ಗುರುದೇವ ಇಂಗ್ಲಿಷ್ ಮೀಡಿಯಂ ಶಾಲೆಯ ಕವನಾ ಮತ್ತು ವಿದ್ಯಾಶ್ರೀ 625 ಅಂಕಗಳನ್ನು ಪಡೆದಿದ್ದಾರೆ.