ಬೆಂಗಳೂರು: ಎಸ್‍ಎಸ್‍ಎಲ್‍ಸಿ ಅಂತಿಮ ಪರೀಕ್ಷೆಯ ವೇಳಾಪಟ್ಟಿಯನ್ನು ಎಸ್‍ಎಸ್‍ಎಲ್‍ಸಿ ಬೋರ್ಡ್ ಬಿಡುಗಡೆ ಮಾಡಿದೆ.
ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು 2019ರ ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ನಡೆಯಲಿವೆ. ಪ್ರತಿ ಪರೀಕ್ಷೆಯ ನಡುವೆ ಒಂದು ದಿನ ಬಿಡುವು ನೀಡಲಾಗಿದೆ.
Advertisement
ವೇಳಾಪಟ್ಟಿ ಹೀಗಿದೆ:
ಮಾರ್ಚ್ 21ರಂದು ಪ್ರಥಮ ಭಾಷೆ ಪರೀಕ್ಷೆ ನಡೆಯಲಿದೆ. ಮಾರ್ಚ್ 23ರಂದು ಕೋರ್ ಸಬ್ಜೆಕ್ಟ್, ಮಾರ್ಚ್ 25ರಂದು ಗಣಿತ, ಮಾರ್ಚ್ 27ರಂದು ದ್ವಿತೀಯ ಭಾಷೆ, 29ರಂದು ಸಮಾಜ ವಿಜ್ಞಾನ, ಏಪ್ರಿಲ್ 2ರಂದು ವಿಜ್ಞಾನ ಮತ್ತು ಏಪ್ರಿಲ್ 4ರಂದು ತೃತೀಯ ಭಾಷೆ ಪರೀಕ್ಷೆ ನಡೆಯಲಿವೆ ಎಂದು ಎಸ್‍ಎಸ್‍ಎಲ್‍ಸಿ ಬೋರ್ಡ್ ತಿಳಿಸಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv