ಚಿಕ್ಕಬಳ್ಳಾಪುರ: ಜಿಲ್ಲೆಯ ಒಂದೇ ಶಾಲೆಯ ಮೂವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿಯ ಬಿಜಿಎಸ್ ಶಾಲೆಯ ಜಯಂತಿ ಬಿ ಗೌಡ, ಲೀಸಾ ಎಚ್.ಸಿ, ಪ್ರೀತಿ ಎಸ್ 625 ಅಂಕಗಳನ್ನು ಪಡೆದಿದ್ದಾರೆ. ವಿಶಿಷ್ಟ ಸಾಧನೆ ಮಾಡಿದ ವಿದ್ಯಾರ್ಥಿನಿಯರನ್ನು ಶಾಲಾ ಆಡಳಿತ ಮಂಡಳಿ ಅಭಿನಂದಿಸಿದೆ.
Advertisement
Advertisement
ಶಿಡ್ಲಘಟ್ಟದ ಬಿಜಿಎಸ್ ಶಾಲೆಯ ಜಿ ಹರ್ಷಿತಾ ಹಾಗೂ ಗೌರಿಬಿದನೂರಿನ ಬಿಜಿಎಸ್ ಶಾಲೆಯ ತೃಪ್ತಿ ಕೆಸಿ 625 ಅಂಕಗಳನ್ನು ಪಡೆದಿದ್ದಾರೆ. ಜಿಲ್ಲೆಯ ಐದು ವಿದ್ಯಾರ್ಥಿಗಳು 625 ಅಂಕ ಪಡೆದಿದ್ದಾರೆ.
Advertisement
ಈ ಬಾರಿ ರಾಜ್ಯದಲ್ಲಿ ಶೇ.85.63 ರಷ್ಟು ಫಲಿತಾಂಶ ಪ್ರಕಟವಾಗಿದೆ. 10 ವರ್ಷಗಳಲ್ಲೇ ಇದು ದಾಖಲೆ ಫಲಿತಾಂಶವಾಗಿದೆ.
Advertisement
ಶೇ. 81.03 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ ಶೇ.90.29 ವಿದ್ಯಾರ್ಥಿನಿಯರು ಪಾಸ್ ಆಗಿದ್ದಾರೆ. 145 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿರುವುದು ವಿಶೇಷ. ಸರ್ಕಾರಿ ಶಾಲೆಯ 21, ಅನುದಾನಿತ ಶಾಲೆಯ 8, ಖಾಸಗಿ ಶಾಲೆಯ 116 ವಿದ್ಯಾರ್ಥಿಗಳು 625 ಅಂಕ ಪಡೆದಿದ್ದಾರೆ.