Bengaluru CityDistrictsKarnatakaLatestLeading NewsMain Post
ಮೇ 19ಕ್ಕೆ ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಮೇ 19 ರಂದು ಎಸ್‌ಎಸ್‌ಎಲ್‌ಸಿ(SSLC) ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.
ಶಿಕ್ಷಣ ಸಚಿವರ ಸುದ್ದಿಗೋಷ್ಠಿ ಬಳಿಕ ಎಸ್ಎಸ್ಎಲ್‌ಸಿ ಬೋರ್ಡ್ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಮರು ದಿನ ಆಯಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ: ಕಾಲೇಜು ದಿನಗಳಲ್ಲೇ ರಮ್ಯಾ ಮೇಲೆ ಕ್ರಶ್ ಆಗಿದೆ : ರಕ್ಷಿತ್ ಶೆಟ್ಟಿ
ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ಪರೀಕ್ಷೆ ನಡೆದಿತ್ತು. ಸುಮಾರು 8.73 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಮೂರು ದಿನದ ಹಿಂದೆ ಮಾತನಾಡಿದ್ದ ಸಚಿವ ನಾಗೇಶ್, ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ ಮೇ ಮೂರನೇ ವಾರ ಪ್ರಕಟ ಮಾಡಲಾಗುತ್ತದೆ ಎಂದು ತಿಳಿಸಿದ್ದರು.
ಈಗಾಗಲೇ ಮೌಲ್ಯಮಾಪನ ಪ್ರಕ್ರಿಯೆ ಮುಕ್ತಾಯವಾಗಿದೆ. ಫಲಿತಾಂಶದ ತಯಾರಿ ಮಾಡಲಾಗುತ್ತಿದೆ. ಮೂರನೇ ವಾರ ಫಲಿತಾಂಶ ಪ್ರಕಟ ಮಾಡುತ್ತೇವೆ. ಶೀಘ್ರವೇ ದಿನಾಂಕ ಪ್ರಕಟ ಮಾಡುತ್ತೇವೆ ಎಂದು ತಿಳಿಸಿದ್ದರು.