ಬಾಗಲಕೋಟೆ: ಎಸ್‌ಎಸ್‌ಎಲ್‌ಸಿ (SSLC) ಫಲಿತಾಂಶ (Result) ಗುರುವಾರ ಪ್ರಕಟಗೊಂಡಿದ್ದು, 625ಕ್ಕೆ 625 ಅಂಕ ಗಳಿಸುವ ಮೂಲಕ ಬಾಗಲಕೋಟೆಯ (Bgalkote) ಅಂಕಿತಾ ಬಸಪ್ಪ ಕೊಣ್ಣುರ್ (Ankita Basappa Konnur) ರಾಜ್ಯಕ್ಕೆ ಟಾಪರ್ ಆಗಿದ್ದಾರೆ.
ಅಂಕಿತಾ ಬಸಪ್ಪ ಮುಧೋಳ ತಾಲೂಕಿನ ಮೆಳ್ಳಿಗೇರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಇದೀಗ 625ಕ್ಕೆ 625 ಅಂಕಗಳನ್ನು ಪಡೆದ ಏಕೈಕ ವಿದ್ಯಾರ್ಥಿನಿ ಎಂಬ ಹೆಗ್ಗಳಿಕೆಗೆ ಅಂಕಿತಾ ಪಾತ್ರರಾಗಿದ್ದಾರೆ. ಈ ಬಾರಿ ಒಟ್ಟು 73.40% ಫಲಿತಾಂಶ ಬಂದಿದ್ದು, ಎಂದಿನಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಇದನ್ನೂ ಓದಿ: SSLC Result: 73.40 % ಫಲಿತಾಂಶ – ಬಾಲಕಿಯರೇ ಮೇಲುಗೈ; ಉಡುಪಿಗೆ ಮೊದಲ ಸ್ಥಾನ
ಪರೀಕ್ಷೆಯಲ್ಲಿ ಒಟ್ಟು 6,31,204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಉಡುಪಿ 94% ಫಲಿತಾಂಶ ಪಡೆಯುವ ಮೂಲಕ ಮೊದಲ ಸ್ಥಾನ ಪಡೆದಿದ್ದು, 92% ಫಲಿತಾಂಶ ಪಡೆದು ದಕ್ಷಿಣ ಕನ್ನಡ ಎರಡನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಮೂರನೇ ಸ್ಥಾನವನ್ನು ಶಿವಮೊಗ್ಗ ದಕ್ಕಿಸಿಕೊಂಡಿದ್ದು, ಯಾದಗಿರಿ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ. ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ ಸಿಂಗ್, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಫಲಿತಾಂಶ ಪ್ರಕಟಿಸಿದ್ದಾರೆ. ಇದನ್ನೂ ಓದಿ: ಇಂದು SSLC ಫಲಿತಾಂಶ ಪ್ರಕಟ