– ಕೊನೆ ಸ್ಥಾನದಲ್ಲಿ ಯಾದಗಿರಿ
– ಗ್ರಾಮೀಣ ವಿದ್ಯಾರ್ಥಿಗಳಿಂದ ಉತ್ತಮ ಸಾಧನೆ
ಬೆಂಗಳೂರು: ಎಸ್‌ಎಸ್‌ಎಲ್‌ಸಿ (SSLC Result) ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, 73.40 % ಫಲಿತಾಂಶ ಬಂದಿದೆ. ಪರೀಕ್ಷೆಯಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಕರ್ನಾಟಕ (Karnataka) ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಅವರು ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ. ಇವರ ಜೊತೆ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ ಸಿಂಗ್ ಉಪಸ್ಥಿತರಿದ್ದರು. ಇದನ್ನೂ ಓದಿ: ಇಂದು ಜೆಡಿಎಸ್ ಕೋರ್ ಕಮಿಟಿ ಸಭೆ – ಪಕ್ಷದಿಂದ ಪ್ರಜ್ವಲ್ ಉಚ್ಚಾಟನೆ ಬಗ್ಗೆ ಚರ್ಚೆ ಸಾಧ್ಯತೆ
ಪರೀಕ್ಷೆಯಲ್ಲಿ ಒಟ್ಟು 6,31,204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅವರ ಪೈಕಿ ಬಾಲಕರು – 2,87,416 (65.90%) ಹಾಗೂ ಬಾಲಕಿಯರು – 3,43,788 (81.11%) ಪಾಸ್ ಆಗಿದ್ದಾರೆ.
94% ಫಲಿತಾಂಶದೊಂದಿಗೆ ಉಡುಪಿ ಮೊದಲ ಸ್ಥಾನದಲ್ಲಿದೆ. 92.12% ನೊಂದಿಗೆ ದಕ್ಷಿಣ ಕನ್ನಡ ಹಾಗೂ 88.67% ನೊಂದಿಗೆ ಶಿವಮೊಗ್ಗ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿವೆ. ಯಾದಗಿರಿ ಯಾದಗಿರಿ – 50.59% ನೊಂದಿಗೆ ಕೊನೆ ಸ್ಥಾನದಲ್ಲಿದೆ. ಇದನ್ನೂ ಓದಿ: ಇಂದು SSLC ಫಲಿತಾಂಶ ಪ್ರಕಟ
ಫಲಿತಾಂಶದಲ್ಲಿ ಕುಸಿತ
ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳ ಪ್ರತಿ ಕೊಠಡಿಯಲ್ಲೂ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿತ್ತು. ಹೀಗಾಗಿ ಫಲಿತಾಂಶದಲ್ಲಿ ಕುಸಿತ ಕಂಡಿದೆ. 2022-23ನೇ ಸಾಲಿನಲ್ಲಿ 83.89% ರಷ್ಟು ಫಲಿತಾಂಶ ದಾಖಲಾಗಿತ್ತು. ಆದರೆ ಈ ಬಾರಿ 73.40% ಫಲಿತಾಂಶ ಬಂದಿದೆ.
100% ಫಲಿತಾಂಶ ವಿವರ
ಸರ್ಕಾರಿ – 785
ಅನುದಾನ – 206
ಖಾಸಗಿ ಶಾಲೆ – 1297
ಒಟ್ಟು – 2288
ಶೂನ್ಯ ಸಾಧನೆ ಶಾಲೆಗಳು
ಸರ್ಕಾರಿ – 3
ಅನುದಾನ – 13
ಖಾಸಗಿ – 62
ಒಟ್ಟು – 78