ಬೆಂಗಳೂರು: ಪ್ರವಾಸೋದ್ಯಮವನ್ನು ಉತ್ತೇಜಿಸಲು ಮತ್ತು ಅಭಿವೃದ್ಧಿ ಪಡಿಸಲು ಬಜೆಟ್‍ನಲ್ಲಿ ಕೆಲವು ಯೋಜನೆಗಳನ್ನು ಪ್ರಕಟಿಸಲಾಗಿದೆ.
* ಪ್ರವಾಸೋದ್ಯಮ ಅಭಿವೃದ್ಧಿ ಹಂಪಿ-ಬಾದಾಮಿ-ಐಹೊಳೆ-ಪಟ್ಟದಕಲ್ಲು-ವಿಜಯಪುರ ಪ್ರವಾಸಿ ವೃತ್ತವನ್ನು ಮತ್ತು ಮೈಸೂರು-ಶ್ರೀರಂಗಪಟ್ಟಣ-ಹಾಸನ-ಬೇಲೂರು-ಹಳೇಬೀಡು ಪ್ರವಾಸಿ ವೃತ್ತವನ್ನಾಗಿ ಅಭಿವೃದ್ಧಿಗೆ ಕ್ರಮ. ಇದನ್ನೂ ಓದಿ : ಏಳು ತಿಂಗಳ ಗರ್ಭಿಣಿಗೆ ಇದೆಂಥ ಟಾರ್ಚರ್? : ಶಾಕ್ ನಲ್ಲಿ ನಟಿ ಸಂಜನಾ
Advertisement
* ಶ್ರೀರಂಗಪಟ್ಟಣ, ಬೇಲೂರು, ಹಳೇಬೀಡು, ಸೋಮನಾಥಪುರಗಳನ್ನು ಒಳಗೊಂಡಂತೆ ಹೊಯ್ಸಳರ ಸ್ಮಾರಕಗಳನ್ನು ಪ್ರಸಕ್ತ ಸಾಲಿನಲ್ಲಿ ಯುನೆಸ್ಕೊ ವಿಶ್ವ ಪರಂಪರೆ ತಾಣಗಳ ಪಟ್ಟಿಗೆ ಸೇರಿಸಲು ಕ್ರಮ.
Advertisement
* ಜೋಗ ಜಲಪಾತದಲ್ಲಿ 116 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಹೋಟೆಲ್ ಹಾಗೂ ರೋಪ್‍ವೇ ಅಭಿವೃದ್ಧಿ.
* ನಂದಿ ಬೆಟ್ಟದಲ್ಲಿ 93 ಕೋಟಿ ರೂ. ವೆಚ್ಚದಲ್ಲಿ ರೋಪ್‍ವೇ ನಿರ್ಮಾಣಕ್ಕೆ ಅನುಮೋದನೆ.
* ಉತ್ತರ ಕನ್ನಡ ಜಿಲ್ಲೆಯ ಯಾಣದಲ್ಲಿ ರೋಪ್‍ವೇ ನಿರ್ಮಾಣಕ್ಕೆ ಕ್ರಮ.
Advertisement
Advertisement
* ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ 100 ಕೋಟಿ ರೂ. ವೆಚ್ಚದಲ್ಲಿ ಯೋಜನೆ.
* ಪರ್ವತ ಮಾಲಾ ಯೋಜನೆಯಡಿ ಚಾಮುಂಡಿ ಬೆಟ್ಟ ಹಾಗೂ ಮುಳ್ಳಯ್ಯನಗಿರಿ ದತ್ತಪೀಠಗಳಲ್ಲಿ ರೋಪ್‍ವೇ ನಿರ್ಮಾಣಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ.
* ಕಡಲತೀರದ ಪ್ರವಾಸೋದ್ಯಮ ಉತ್ತೇಜನಕ್ಕೆ ಸಿ.ಆರ್.ಜಡ್ ಮಾನದಂಡಗಳನ್ನು ಸಡಿಲಗೊಳಿಸಲು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿ ಅನುಮೋದನೆ ಪಡೆಯಲು ಕ್ರಮ.
* ತದಡಿ ಬಂದರಿನಲ್ಲಿ ಸಮಗ್ರ ಪರಿಸರ-ಪ್ರವಾಸೋದ್ಯಮ ಕೇಂದ್ರ ಅಭಿವೃದ್ಧಿ.
* ಪಾರಂಪರಿಕ ಪ್ರವಾಸಿ ತಾಣಗಳಾದ ಬೀದರ್ ಹಾಗೂ ಕಲಬುರಗಿ ಕೋಟೆಗಳ ಪುನರುಜ್ಜೀವನಕ್ಕೆ ಕ್ರಮ.
* ರಾಜ್ಯದ ಸ್ಮಾರಕಗಳನ್ನು ದತ್ತು ಪಡೆದು ಅಭಿವೃದ್ಧಿಪಡಿಸಲು Adopt a Monument ಯೋಜನೆ ಜಾರಿ.
* ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಹಾಗೂ ಚಿಕ್ಕಮಗಳೂರಿನ ಮುಳ್ಳಯ್ಯಗಿರಿ ದತ್ತಪೀಠ ಬೆಟ್ಟದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ರೋಪ್‍ವೇ ನಿರ್ಮಾಣ ಮಾಡಲು ಕೇಂದ್ರ ಸರ್ಕಾರದ “ಪರ್ವತಮಾಲಾ” ಯೋಜನೆಯಡಿ ಪ್ರಸ್ತಾವನೆಯನ್ನು ಸಲ್ಲಿಕೆ