ಬೆಂಗಳೂರು: ಗಣರಾಜ್ಯೋತ್ಸವದ ವೇಳೆ ಕೇರಳದ ಟ್ಯಾಬ್ಲೋವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿ ಬಿಜೆಪಿ ಟೀಕೆಗೆ ಗುರಿಯಾಗಿತ್ತು. ಈಗ ಡ್ಯಾಮೇಜ್ ಕಂಟ್ರೋಲ್ ಮಾಡಲು ಕರ್ನಾಟಕ ಸರ್ಕಾರ ನಾರಾಯಣ ಗುರುಗಳ ಹೆಸರಿನಲ್ಲಿ ಶಾಲೆ ಆರಂಭಿಸಲು ಮುಂದಾಗಿದೆ.
ಮಾನವೀಯತೆ, ಸಮಾನತೆ ಹರಿಕಾರ, ಶ್ರೀನಾರಾಯಣ ಗುರುವರರರ ಸ್ಮರಣಾರ್ಥಕ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದು ಶ್ರೀ ನಾರಾಯಣ ಗುರು ವಸತಿ ಶಾಲೆಯನ್ನು ಪ್ರಾಂಭಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಬಜೆಟ್‍ನಲ್ಲಿ ಏನಿದೆ?
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿ ವಿವಿಧ ಸಮುದಾಯಗಳ ಅಭಿವೃದ್ಧಿಗಾಗಿ ಸ್ಥಾಪಿಸಲಾಗಿರುವ ನಿಗಮಗಳ ಮೂಲಕ 400 ಕೋಟಿ ರೂಪಾಯಿ ಮೊತ್ತದಲ್ಲಿ ಈ ಯೋಜನೆಯನ್ನು ಹಮ್ಮಿಕೊಳ್ಳಲಾಗುವುದು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿ ವಿವಿಧ ಸಮುದಾಯಗಳ ಅಭಿವೃದ್ಧಿಗಾಗಿ ಸ್ಥಾಪಿಸಲಾಗಿರುವ ನಿಗಮಗಳ ಮೂಲಕ 400 ಕೋಟಿ ರೂಪಾಯಿ ಮೊತ್ತದಲ್ಲಿ ಈ ಯೋಜನೆಯಮನ್ನು ಹಮ್ಮಿಕೊಳ್ಳಲಾಗುವುದು. ದೇವರಾಜ ಅರಸು ಅಭಿವೃದ್ಧಿ ನಿಗಮದ ಮೂಲಕ ಹಿಂದುಳಿದ ಹಾಗೂ ಅತೀ ಹಿಂದುಳಿದ ಸಮುದಾಯಗಳಾದ ತಿಗಳ, ಮಾಳಿ, ಮಾಳಿ ಮಾಲಗಾg, ಕುಂಬಾರ, ಯಾದವ, ದೇವಾಡಿಗ, ಸಿಂಪಿ, ಕ್ಷತ್ರಿಯ, ಮೇದಾರ, ಕಂಚಿ, ಕುರ್ಮ, ಪಿಂಜಾರ/ ನದಾಫ್, ಕುರುಬ, ಬಲಿಜ, ಈಡಿಗ, ಹಡಪ ಹಾಗೂ ಇತರ ಜನಾಂಗದ ಅಭಿವೃದ್ಧಿಗೆ 400 ಕೋಟಿ ರೂಪಾಯಿ ಮೊತ್ತದಲ್ಲಿ ಕಾರ್ಯಕ್ರಮ ರೂಪಿಸಲಾಗುವುದು.
ಎಸ್.ಸಿ/ಎಸ್.ಟಿ ಮಹಿಳೆಯಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸಲು ಇಲಾಖೆಗಳ ಅಡಿಯಲ್ಲಿರುವ ಎಲ್ಲಾ ಅಭಿವೃದ್ಧಿ ನಿಗಮಗಳ ಸ್ವಯಂ ಉದ್ಯೋಗ ಮತ್ತು ಇತರೆ ಕಾರ್ಯಕ್ರಮಗಳಲ್ಲಿನ ಗುರಿಯಲ್ಲಿ ಎಸ್.ಟಿ/ಎಸ್/ಟಿ ಮಹಿಳೆಯರಿಗೆ ಶೇ.25 ರಷ್ಟು ಕಾಯ್ದಿರಿಸಲಿದೆ. ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಳೆಗಳ ವ್ಯಾಪ್ತಿಗೆ ಬರುವ ವಿವಿಧ ಅಭಿವೃದ್ಧಿ ನಿಗಮಗಳಿಂದ ಒಟ್ಟಾರೆ 800 ಕೋಟಿ ರೂಪಾಯಿಗಳ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು
ದುರ್ಬಲ ವರ್ಗಗಳ ಸಬಲೀಕರಣ:
• ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಅಭಿವೃದ್ಧಿ ನಿಗಮಗಳ ಯೋಜನೆಗಳಿಗೆ 800 ಕೋಟಿ ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಇತರೆ ವರ್ಗದ ಮಕ್ಕಳಿಗಾಗಿ 250 ಕೋಟಿ ರೂ. ವೆಚ್ಚದಲ್ಲಿ ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು ಮತ್ತು ಮೈಸೂರಿನಲ್ಲಿ ತಲಾ 1000 ಸಾಮಥ್ರ್ಯದ ಬಹುಮಹಡಿಯ ದೀನ್‍ದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿ ನಿಲಯ ಸಮುಚ್ಛಯ ನಿರ್ಮಾಣ.
• ಪ್ರತಿ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಒಂದು ಶಾಲೆಯನ್ನು ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಯಾಗಿ ಮರುನಾಮಕರಣ; ಪದವಿ ಪೂರ್ವ ತರಗತಿ ಪ್ರಾರಂಭ: ಸಿಬಿಎಸ್‍ಇ ಮಾನ್ಯತೆ ಪಡೆಯಲು ಕ್ರಮ. 25 ಕೋಟಿ ರೂ. ಅನುದಾನ.
• ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದು ಶ್ರೀ ನಾರಾಯಣ ಗುರು ವಸತಿ ಶಾಲೆ ಪ್ರಾರಂಭ.
• ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳ ಅಡಿಯಲ್ಲಿರುವ ಎಲ್ಲಾ ಅಭಿವೃದ್ಧಿ ನಿಗಮಗಳ ಸ್ವಯಂ ಉದ್ಯೋಗ ಮತ್ತು ಇತರೆ ಕಾರ್ಯಕ್ರಮಗಳ ಗುರಿಯಲ್ಲಿ ಶೇ.25ರಷ್ಟು ಮಹಿಳೆಯರಿಗೆ ಮೀಸಲು.
• ಗಂಗಾ ಕಲ್ಯಾಣ ಯೋಜನೆಯಲ್ಲಿ ಸುಧಾರಣೆ; ಬೋರ್ ವೆಲ್ ಕೊರೆಯಲು ಡಿ.ಬಿ.ಟಿ. ಮೂಲಕ ಹಣ ವರ್ಗಾವಣೆ; ವಿದ್ಯುದೀಕರಣ ಶುಲ್ಕ ಸರ್ಕಾರದಿಂದ ಪಾವತಿ. 2022-23ರಲ್ಲಿ ಒಟ್ಟಾರೆ 1,115 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ.
• ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ಸಮುದಾಯಗಳ ನಿಗಮಗಳಡಿ 400 ಕೋಟಿ ರೂ. ಅಭಿವೃದ್ಧಿ ಯೋಜನೆ. ದೇವರಾಜ ಅರಸು ಅಭಿವೃದ್ಧಿ ನಿಗಮದಡಿ ಬರುವ ಇತರ ಹಿಂದುಳಿದ ಸಮುದಾಯಗಳಿಗೆ 400 ಕೋಟಿ ರೂ. ಯೋಜನೆ
• ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಹಾಗೂ ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ ತಲಾ 100 ಕೋಟಿ ರೂ. ಯೋಜನೆ.
• ಮರಾಠಾ ಅಭಿವೃದ್ಧಿ ನಿಗಮದ ಕಾರ್ಯಕ್ರಮಗಳಿಗೆ 50 ಕೋಟಿ ರೂ.
• ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ 50 ಕೋಟಿ ರೂ. ಯೋಜನೆ ಹಾಗೂ ಜೈನ, ಸಿಖ್ ಮತ್ತು ಬೌದ್ಧ ಸಮುದಾಯಗಳ ಅಭಿವೃದ್ಧಿಗೆ 50 ಕೋಟಿ ರೂ. ಯೋಜನೆ.