ಬೆಂಗಳೂರು: ಕ್ರೀಡಾಪಟುಗಳಿಗೆ ನೇರ ನೇಮಕಾತಿಯಡಿ ಒಲಿಂಪಿಕ್ಸ್ (Olympics), ಏಷ್ಯನ್ ಗೇಮ್ಸ್ (Asian Games), ಕಾಮನ್‍ವೆಲ್ತ್ (Commonwealth Games) ಮತ್ತು ಪ್ಯಾರಾಲಿಂಪಿಕ್ಸ್‌ನಲ್ಲಿ (Paralympics) ಪದಕ ವಿಜೇತ ಕನ್ನಡಿಗರಿಗೆ ಸರ್ಕಾರಿ ಉದ್ಯೋಗ (Government Job) ನೀಡಲು ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ.
Advertisement
ಒಲಿಂಪಿಕ್ಸ್, ಏಷ್ಯನ್ ಗೇಮ್ಸ್, ಕಾಮನ್ ವೆಲ್ತ್ ಮತ್ತು ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ವಿಜೇತರಿಗೆ ಗ್ರೂಪ್ ಎ, ಬಿ, ಸಿ, ಡಿ ಹುದ್ದೆಗಳಿಗೆ ನೇರ ನೇಮಕ ಮಾಡಲು ನಿಯಮಾವಳಿಗೆ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದನ್ನೂ ಓದಿ: ಸ್ಟೇಡಿಯಂನಿಂದ ಮೈದಾನಕ್ಕೆ ಬಂದು ರೋಹಿತ್‍ರನ್ನು ತಬ್ಬಿಕೊಂಡ ಬಾಲಕ
Advertisement
Advertisement
ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಕೆಲವು ಹುದ್ದೆಗಳಿಗೆ ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷ್ಯನ್ ಗೇಮ್ಸ್ ಮತ್ತು ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ ಪದಕ ವಿಜೇತರಿಗೆ ಅನ್ವಯ ವಾಗಲಿದ್ದು, ಸ್ನಾತಕ ಪದವಿಗಿಂತ ಕಡಿಮೆ ಶೈಕ್ಷಣಿಕ ವಿದ್ಯಾರ್ಹತೆಯನ್ನು ಹೊಂದಿದ ಪದಕ ವಿಜೇತರಿಗೂ ಅನ್ವಯವಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: IND vs NZ 2nd ODI: ರಾಯ್‍ಪುರದಲ್ಲಿ ಟೀಂ ಇಂಡಿಯಾಗೆ ರಾಜ ಮರ್ಯಾದೆ – ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಜಯದೊಂದಿಗೆ ಸರಣಿ ಕೈವಶ
Advertisement
ಒಲಂಪಿಕ್ಸ್ ಹಾಗೂ ಪ್ಯಾರಾಲಂಪಿಕ್ಸ್ ಪದಕ ವಿಜೇತರಿಗೆ ಪದವೀಧರರಿಗೆ ಗ್ರೂಪ್-ಎ ಉದ್ಯೋಗ. ಏಷ್ಯನ್ ಗೇಮ್ಸ್ ಹಾಗೂ ಕಾಮನ್ ವೆಲ್ತ್ ಪದಕ ವಿಜೇತ ಪದವೀಧರರಿಗೆ ಗ್ರೂಪ್-ಬಿ ಉದ್ಯೋಗ, ಇದಕ್ಕಿಂತ ಕಡಿಮೆ ಸ್ತರದ ಕ್ರೀಡಾಕೂಟದ ಪದಕ ವಿಜೇತರಿಗೆ ಗ್ರೂಪ್-ಸಿ ಹಾಗೂ ಗ್ರೂಪ್-ಡಿ ಉದ್ಯೋಗ ನೀಡುವ ಭರವಸೆಯನ್ನು ಈ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k