ಬೆಂಗಳೂರು: ಕೊರೊನಾ ಪಾಸಿಟಿವ್ ರೇಟ್ ರಾಜ್ಯದಲ್ಲಿ ಹೆಚ್ಚಾಗುತ್ತಿದ್ದು, ಇಂದು 8,449 ಹೊಸ ಕೇಸ್ ಗಳು ಪತ್ತೆಯಾಗಿದೆ. ಸೋಂಕಿನಿಂದ ನಾಲ್ವರು ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ 6,812 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಸೋಂಕಿನಿಂದ ಇಬ್ಬರು ಸಾವನ್ನಪ್ಪಿದರೆ, ಒಬ್ಬರು ಬೇರೆ ಕಾರಣಕ್ಕೆ ಸಾವನ್ನಪ್ಪಿದ್ದಾರೆ.
Advertisement
Advertisement
ರಾಜ್ಯದಲ್ಲಿ ಇಂದು 505 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಒಟ್ಟು ರಾಜ್ಯದಲ್ಲಿ 29,62,548 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.4.15ಕ್ಕೆ ಏರಿಕೆಯಾಗಿದ್ದು, ಮರಣ ಪ್ರಮಾಣ ಶೇ.0.04 ಇದೆ. ರಾಜ್ಯದಲ್ಲಿ ಇಂದು ಓಮಿಕ್ರಾನ್ ಕೇಸ್ ಪತ್ತೆಯಾಗಿಲ್ಲ.
Advertisement
Advertisement
3,44,917 ಜನರಿಗೆ ರಾಜ್ಯದಲ್ಲಿ ಇಂದು ಕೊರೊನಾ ಲಸಿಕೆ ಹಾಕಲಾಗಿದೆ. ಒಟ್ಟು 2,03,260 ಸ್ಯಾಂಪಲ್ (ಆರ್ಟಿ-ಪಿಸಿಆರ್ 1,33,308 + 69,952 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಅಧಿಕಾರದಲ್ಲಿದ್ದಾಗ ಕುಂಭಕರ್ಣ ನಿದ್ದೆ, ಈಗ ಮೇಕದಾಟು ಹೋರಾಟ: ಡಿಕೆಶಿಗೆ ಕಾರಜೋಳ ಟಾಂಗ್
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 2, ಬಳ್ಳಾರಿ 62, ಬೆಳಗಾವಿ 114, ಬೆಂಗಳೂರು ಗ್ರಾಮಾಂತರ 74, ಬೆಂಗಳೂರು ನಗರ 6,812, ಬೀದರ್ 20, ಚಾಮರಾಜನಗರ 7, ಚಿಕ್ಕಬಳ್ಳಾಪುರ 21, ಚಿಕ್ಕಮಗಳೂರು 24, ಚಿತ್ರದುರ್ಗ 14, ದಕ್ಷಿಣ ಕನ್ನಡ 211, ದಾವಣಗೆರೆ 18, ಧಾರವಾಡ 66, ಗದಗ 10, ಹಾಸನ 89, ಹಾವೇರಿ 0, ಕಲಬುರಗಿ 43, ಕೊಡಗು 29, ಕೋಲಾರ 98, ಕೊಪ್ಪಳ 5, ಮಂಡ್ಯ 129, ಮೈಸೂರು 219, ರಾಯಚೂರು 2, ರಾಮನಗರ 20, ಶಿವಮೊಗ್ಗ 43, ತುಮಕೂರು 96, ಉಡುಪಿ 148, ಉತ್ತರ ಕನ್ನಡ 36, ವಿಜಯಪುರ 36 ಮತ್ತು ಯಾದಗಿರಿಯಲ್ಲಿ 1 ಪಾಸಿಟಿವ್ ಪ್ರಕರಣ ದಾಖಲಾಗಿದೆ.