ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾದಿಂದ ಗುಣಮುಖರಾಗಿ ಒಟ್ಟು 745 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, 8 ಜನರು ಮೃತಪಟ್ಟಿದ್ದಾರೆ.
ಬೆಂಗಳೂರು ನಗರದಲ್ಲಿ 185 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 6 ಮರಣ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ 205 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 6,416 ಸಕ್ರಿಯ ಪ್ರಕರಣಗಳು ಇದ್ದು, ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 29,96,148 ಜನರಿಗೆ ಕೊರೊನಾ ಬಂದಿದೆ. 29,51,492 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.2.74 ರಷ್ಟಿದ್ದರೆ, ಪಾಸಿಟಿವಿಟಿ ರೇಟ್ ಶೇ.0.47 ರಷ್ಟಿದೆ. ಇದನ್ನೂ ಓದಿ: 2 ಡೋಸ್ ಪಡೆದವರಿಗೆ ಚಿಕಿತ್ಸೆ – ಸರ್ಕಾರಿ ಸೌಲಭ್ಯ ಕಡಿತಗೊಳಿಸಿ
ಇಂದು ಒಟ್ಟು 61,804 ಸ್ಯಾಂಪಲ್ (ಆರ್ಟಿ ಪಿಸಿಆರ್ 43,510+ 18,294 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ಕಲಬುರಗಿ, ಬೀದರ್, ವಿಜಯಪುರ, ಚಿತ್ರದುರ್ಗ, ರಾಯಚೂರು, ರಾಮನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾವೇರಿ, ಗದಗ, ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.
ಬಳ್ಳಾರಿ 1, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 185, ಚಿತ್ರದುರ್ಗ 2, ಚಾಮರಾಜನಗರ 3, ದಕ್ಷಿಣ ಕನ್ನಡ 19, ದಾವಣಗೆರೆ 1, ಧಾರವಾಡ 09, ಹಾಸನ 03, ಕೊಡಗು 14, ಕೋಲಾರ 01, ಮಂಡ್ಯ 01, ಮೈಸೂರು 28, ಶಿವಮೊಗ್ಗ 8, ತುಮಕೂರು 05, ಉಡುಪಿ 7, ಉತ್ತರ ಕನ್ನಡ 1 ಜನರಿಗೆ ಸೋಂಕು ಬಂದಿದೆ.