ಬೆಂಗಳೂರು: ರಾಜ್ಯದಲ್ಲಿ ಕೊರೊನಾ ದಿನೇ -ದಿನೇ ಹೆಚ್ಚಳವಾಗುತ್ತಿದ್ದು, ಪಾಸಿಟಿವಿಟಿ ದರ ಹೇಚ್ಚಾಗುತ್ತಿದೆ. ರಾಜ್ಯದಲ್ಲಿಂದು 1,691 ಪ್ರಕರಣಗಳು ದಾಖಲಾಗಿದ್ದು, 6 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.
ಇಂದು ರಾಜ್ಯದಲ್ಲಿ 1,982 ಮಂದಿ ಕೊರೊನಾದಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 39,75,855 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಇಂದು 27,725 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರೊಂದಿಗೆ ಇಲ್ಲಿಯವರೆಗೆ 6,81,18,690 ಮಂದಿಯನ್ನು ಟೆಸ್ಟ್ ಮಾಡಲಾಗಿದೆ. ಇದನ್ನೂ ಓದಿ: ಬೀದಿ ಬದಿ ಪಾನಿಪುರಿ ತಿಂದು 100ಕ್ಕೂ ಹೆಚ್ಚು ಜನ ಅಸ್ವಸ್ಥ
ಕೋವಿಡ್‌ನಿಂದ ಇಂದು 6 ಮರಣ ಪ್ರಕರಣ ದಾಖಲಾಗಿದ್ದು, ಇದುವೆರೆಗೆ ಒಟ್ಟು 40,134 ಮಂದಿ ಜೀವ ಕಳೆದುಕೊಂಡಿದ್ದಾರೆ. ಇಂದಿನ ಪಾಸಿಟಿವಿಟಿ ಶೇ.6.09 ಇದೆ. 10,054 ಸಕ್ರಿಯ ಪ್ರಕರಣಗಳಿವೆ. ಇಂದು 27,725 ಮಂದಿಯನ್ನು (9,193 ರ‍್ಯಾಪಿಡ್ ಆಂಟಿಜನ್, 18,532 ಆರ್‌ಟಿ-ಪಿಸಿಆರ್) ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಅಲ್ಲದೇ ಇಂದು 50,950 ಮಂದಿ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರ ರಚಿಸಿದ್ದ ಎಸಿಬಿ ರದ್ದು – ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಮರುಜೀವ
ಬೆಂಳೂರು ನಗರದಲ್ಲೇ 1,225 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ 11, ಬಾಗಲಕೋಟೆ 6, ಬಳ್ಳಾರಿ 58, ಬೆಳಗಾವಿ 29, ಬೀದರ್ 2, ಚಾಮರಾಜನಗರ 27, ಚಿಕ್ಕಬಳ್ಳಾಪುರ 12, ಚಿಕ್ಕಮಗಳೂರಿ 19, ಚಿತ್ರದುರ್ಗ 4, ದಕ್ಷಿಣ ಕನ್ನಡ 6, ದಾವಣಗೆರೆ 19, ಧಾರವಾಡ 42, ಗದಗ 2, ಹಾಸನ 14, ಹಾವೇರಿ 10, ಕಲಬುರಗಿ 15, ಕೊಡಗು 7, ಕೋಲಾರ 7, ಕೊಪ್ಪಳ 3, ಮಂಡ್ಯ 24, ಮೈಸೂರು 88, ರಾಯಚೂರು 9, ರಾಮನಗರ 5, ಶಿವಮೊಗ್ಗ 22, ತುಮಕೂರು 7, ಉಡುಪಿ 8, ಉತ್ತರ ಕನ್ನಡ 7, ವಿಜಯಪುರ 3 ಹಾಗೂ ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿರುವುದಾಗಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಆರೋಗ್ಯ ಇಲಾಖೆ ಕಚೇರಿಗಳಿಗೆ ಮಾಸ್ಕ್ ಕಡ್ಡಾಯ: ಬೆಂಗಳೂರು ಸೇರಿದಂತೆ ರಾಜ್ಯದ ಜಿಲ್ಲೆಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸೌಧದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಆರೋಗ್ಯ ಸೌಧಕ್ಕೆ ಭೇಟಿ ನೀಡುವ ಎಲ್ಲರೂ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಆರೋಗ್ಯ ಸೌಧದ ಆವರಣ ಹಾಗೂ ಕಚೇರಿಯಲ್ಲಿ ಮಾಸ್ ಧರಿಸದಿದ್ದರೆ ಅಂಥವರಿಗೆ 250 ರೂ. ದಂಡ ವಿಧಿಸಲಾಗುವುದು ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಆದೇಶಿಸಿದೆ.