ಬೆಂಗಳೂರು: ಕಳೆದ ಒಂದು ವಾರದಿಂದಲೂ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದು, ನಿನ್ನೆ 1,200 ಇದ್ದ ಕೊರೊನಾ ಸೋಂಕಿತರ ಸಂಖ್ಯೆ ಇಂದು 1,121ಕ್ಕೆ ಇಳಿದಿದೆ. ರಾಜ್ಯದಲ್ಲಿಂದು 1,121 ಪ್ರಕರಣಗಳು ದಾಖಲಾಗಿದ್ದು, ಐವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
Advertisement
ಇಂದು ರಾಜ್ಯದಲ್ಲಿ 1,711 ಮಂದಿ ಕೊರೊನಾದಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 39,83,536 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಇಂದು 14,766 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರೊಂದಿಗೆ ಇಲ್ಲಿಯವರೆಗೆ 6,82,49,341 ಮಂದಿಯನ್ನು ಟೆಸ್ಟ್ ಮಾಡಲಾಗಿದೆ. ಇದನ್ನೂ ಓದಿ: ಕಂಡಲ್ಲಿ ಗುಂಡು ಹಾರಿಸಲು ಅನುಮತಿ ಕೊಟ್ಟರಷ್ಟೇ ಹಿಂದೂಗಳು ಸೇಫ್: ಸಿದ್ದಲಿಂಗ ಸ್ವಾಮೀಜಿ
Advertisement
Advertisement
ಕೋವಿಡ್ನಿಂದ ಇಂದು 5 ಮರಣ ಪ್ರಕರಣ ದಾಖಲಾಗಿದ್ದು, ಇದುವೆರೆಗೆ ಒಟ್ಟು 40,152 ಮಂದಿ ಜೀವ ಕಳೆದುಕೊಂಡಿದ್ದಾರೆ. ಇಂದಿನ ಪಾಸಿಟಿವಿಟಿ ದರ ಶೇ.7.59 ಇದೆ. 9,880 ಸಕ್ರಿಯ ಪ್ರಕರಣಗಳಿವೆ. ಇಂದು 14,766 ಮಂದಿಯನ್ನು (3,177, ರ್ಯಾಪಿಡ್ ಆಂಟಿಜನ್, 11,589 RTPCR) ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಅಲ್ಲದೇ ಇಂದು 45,950 ಮಂದಿ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಕಾಶ್ಮೀರವನ್ನು ಬಿಟ್ಟು ಬನ್ನಿ: ಕಾಶ್ಮೀರಿ ಪಂಡಿತರ ಸಂಘರ್ಷ ಸಮಿತಿ ಒತ್ತಾಯ
Advertisement
ಬೆಂಗಳೂರು ನಗರದಲ್ಲೇ 812 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ 23 , ಬಾಗಲಕೋಟೆ 9, ಬಳ್ಳಾರಿ 33, ಬೆಳಗಾವಿ 23, ಬೀದರ್ 0, ಚಾಮರಾಜನಗರ 7, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 10, ಚಿತ್ರದುರ್ಗ 4, ದಕ್ಷಿಣ ಕನ್ನಡ 6, ದಾವಣಗೆರೆ 13, ಧಾರವಾಡ 16, ಗದಗ 1, ಹಾಸನ 21, ಹಾವೇರಿ 13, ಕಲಬುರಗಿ 4, ಕೊಡಗು 22, ಕೋಲಾರ 3, ಕೊಪ್ಪಳ 2, ಮಂಡ್ಯ 6, ಮೈಸೂರು 33, ರಾಯಚೂರು 7, ರಾಮನಗರ 13, ಶಿವಮೊಗ್ಗ 16, ತುಮಕೂರು 4, ಉಡುಪಿ 5, ಉತ್ತರ ಕನ್ನಡ 6, ವಿಜಯಪುರ 6 ಹಾಗೂ ಯಾದಗಿರಿಯಲ್ಲಿ 2 ಪ್ರಕರಣ ವರದಿಯಾಗಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ.