ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಏರಿಳಿತವಾಗುತ್ತಿದ್ದು, ಇಂದು ಸೋಂಕಿತರ ಸಂಖ್ಯೆ ಹಾಗೂ ಗುಣಮುಖರ ಸಂಖ್ಯೆ ಎರಡರಲ್ಲೂ ಸಮಬಲ ಸಾಧಿಸಿದೆ. ಕಳೆದ 24 ಗಂಟೆಯಲ್ಲಿ 129 ಹೊಸ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, 128 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆದರೆ, ಒಬ್ಬರೂ ಮೃತಪಟ್ಟಿಲ್ಲ ಎನ್ನುವುದು ಆರೋಗ್ಯಾಧಿಕಾರಿಗಳಲ್ಲಿ ಸಮಾಧಾನ ತರಿಸಿದೆ.
Advertisement
ಕೊರೊನಾ ಸೋಂಕು ಸುಧಾರಿಸುತ್ತಿರುವ ವೇಳೆ ಈ ವಾರದಲ್ಲಿ ಸೋಂಕಿನಿಂದ ಜನರು ಮೃತಪಡುತ್ತಿದ್ದಾರೆ. ಈ ಹಿನ್ನೆಲೆ ಆರೋಗ್ಯ ಇಲಾಖೆ ಕೊರೊನಾ ಮುನ್ನೆಚರಿಕೆ ಕ್ರಮಗಳ ಕಡೆ ಹೆಚ್ಚು ಗಮನ ಹರಿಸಿದೆ. ಇಂದು 13,542 ಜನರು ಕೊರೊನಾ ಪರೀಕ್ಷೆಯನ್ನು ಮಾಡಿಸಿಕೊಂಡಿದ್ದಾರೆ.
Advertisement
Advertisement
ಇಲ್ಲಿವರೆಗೂ 40,063 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ. 0.95% ಸೋಂಕು ಪ್ರಮಾಣ ಇದೆ. 1.15% ಮರಣ ಪ್ರಮಾಣ ದಾಖಲಾಗಿದೆ. ರಾಜ್ಯದಲ್ಲಿ ಇಂದು 54,652 ಜನರು ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ. ಒಟ್ಟು 13,542 ಸ್ಯಾಂಪಲ್ (ಆರ್‌ಟಿಪಿಸಿಆರ್ 8747, 4,795 ರ‍್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
Advertisement
ಆರೋಗ್ಯ ಇಲಾಖೆ ಬುಲೆಟಿನ್ ಪ್ರಕಾರ, ಬೆಂಗಳೂರು ನಗರ ಒಂದರಲ್ಲೇ 121 ಪ್ರಕರಣಗಳು ವರದಿಯಾಗಿದ್ದು, ಮೈಸೂರು ಮತ್ತು ದಕ್ಷಿಣ ಕನ್ನಡದಲ್ಲಿ ತಲಾ 2 ಹಾಗೂ ಬಾಗಲಕೋಟೆ, ಹಾಸನ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಲಾ ಒಂದೊಂದು ಪ್ರಕರಣಗಳು ದಾಖಲಾಗಿದೆ.