ಬೆಂಗಳೂರು: ರಾಜಧಾನಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೊರೊನಾ ಹೆಚ್ಚು ಕಾಣಿಸಿಕೊಂಡಿದೆ. ಇಂದು 968 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, 337 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
Advertisement
ಆರೋಗ್ಯ ಇಲಾಖೆ ಪ್ರಕಾರ ಇಂದು ರಾಜ್ಯದಲ್ಲಿ 968 ಜನರಿಗೆ ಕೊರೊನಾ ವೈರಸ್ ಇರುವುದು ದೃಢವಾಗಿದೆ. 337 ಜನರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದನ್ನೂ ಓದಿ: ಟೈಲರ್ ಶಿರಚ್ಛೇದನ ಮಾಡಿದ ಮುಸ್ಲಿಂ ಯುವಕರು ಕೆಲವೇ ಗಂಟೆಗಳಲ್ಲಿ ಅರೆಸ್ಟ್
Advertisement
Advertisement
ಇದುವರೆಗೆ 39,21,387 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 39,66,420ಕ್ಕೆಏರಿಕೆಯಾಗಿದೆ. ರಾಜ್ಯದಲ್ಲಿಂದು ಒಂದೇ ಒಂದು ಮರಣ ಪ್ರಕರಣ ದಾಖಲಾಗಿದೆ. ಕೋವಿಡ್ ಪಾಸಿಟಿವಿಟಿ ದರ ಶೇ.3.69 ಇದ್ದು, ಮೃತರ ಪ್ರಮಾಣ ಶೇ.0.10 ಇದೆ.
Advertisement
ಒಟ್ಟು 17,784 ಸ್ಯಾಂಪಲ್(ಆರ್‌ಟಿಪಿಸಿಆರ್ 11,207 + 6,577 ರ‍್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. 39,216 ಮಂದಿಗೆ ಲಸಿಕೆ ನೀಡಲಾಗಿದೆ. ಇದನ್ನೂ ಓದಿ: ಪ್ರವಾದಿಗಾಗಿ ಒಂದು ಕೊಲೆ ಮಾಡೋಕಾಗಲ್ವೆ? – ಉದಯಪುರ ಹತ್ಯೆಯ ಮಾಸ್ಟರ್‌ಮೈಂಡ್ ವೀಡಿಯೋ ವೈರಲ್
ಬೆಂಗಳೂರು ನಗರದಲ್ಲೇ 887 ಪ್ರಕರಣ ದಾಖಲಾಗಿದ್ದು, ಬಳ್ಳಾರಿಯಲ್ಲಿ 3, ಬೆಳಗಾವಿಯಲ್ಲಿ 2, ಬೆಂಗಳೂರು ಗ್ರಾಮಾಂತರದಲ್ಲಿ 3, ಬೀದರ್‌ನಲ್ಲಿ 2, ಚಿಕ್ಕಮಗಳೂರಿನಲ್ಲಿ 3, ದಕ್ಷಿಣ ಕನ್ನಡದಲ್ಲಿ 21, ಧಾರವಾಡದಲ್ಲಿ 10, ಹಾಸನ 2, ಹಾವೇರಿಯಲ್ಲಿ 1, ಮೈಸೂರಿನಲ್ಲಿ 14, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ತಲಾ ಒಂದೊಂದು ಪ್ರಕರಣ ಹಾಗೂ ಉಡುಪಿಯಲ್ಲಿ 13 ಪ್ರಕರಣಗಳು ದಾಖಲಾಗಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.