ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಪರಿಚಲನೆ ಏರ್ಪಟ್ಟಿದ್ದು, ಕರ್ನಾಟಕದಲ್ಲಿ 2 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮುಂದಿನ ಹಾಲಿ ಹವಾಮಾನ ಪರಿಸ್ಥಿತಿ ಕುರಿತು ಮಾಹಿತಿ ನೀಡಿರುವ ಹವಾಮಾನ ಇಲಾಖೆ, ಆಗ್ನೇಯ ಮತ್ತು ಪಕ್ಕದ ನೈಋತ್ಯ ಬಂಗಾಳ ಕೊಲ್ಲಿಯ ಮೇಲೆ ಚಂಡಮಾರುತದ ಪರಿಚಲನೆ ಈಗ ನೈಋತ್ಯ ಮತ್ತು ಪಕ್ಕದ ಆಗ್ನೇಯ ಬಂಗಾಳ ಕೊಲ್ಲಿಯ ಮೇಲೆ ಇದ್ದು, ಸಮುದ್ರ ಮಟ್ಟದಿಂದ 3.1 ಕಿ.ಮೀ.ವರೆಗೆ ವಿಸ್ತರಿಸಿದೆ. ಅಂತೆಯೇ ಜನವರಿ 13 ಮತ್ತು 14ರಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಪ್ರಮುಖವಾಗಿ ಜನವರಿ 13ರಂದು ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಹಗುರ ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಕರಾವಳಿ ಕರ್ನಾಟಕ, ಉತ್ತರ ಒಳನಾಡು ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಹೆಚ್ಚು. ವಿಜಯಪುರ, ಬೀದರ್, ಕಲಬುರ್ಗಿ, ಬಾಗಲಕೋಟೆ, ಧಾರವಾಡ, ಬೆಳಗಾವಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದಲ್ಲಿ ಮಂಜು ಬೀಳುವ ಸಾಧ್ಯತೆ ಹೆಚ್ಚು ಎಂದು ಹೇಳಿದೆ.
Advertisement
Advertisement
ಜನವರಿ 14ರಂದು ಮೈಸೂರು, ಮಂಡ್ಯ, ಕೊಡಗು, ಹಾಸನ ಮತ್ತು ತುಮಕೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳನ್ನು ಹೊರತು ಪಡಿಸಿದರೆ ಕರಾವಳಿ ಕರ್ನಾಟಕ, ಉತ್ತರ ಒಳನಾಡು ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಇರುವ ಸಾಧ್ಯತೆ ಇದೆ. ವಿಜಯಪುರ, ಬೀದರ್, ಕಲಬುರ್ಗಿ, ಬಾಗಲಕೋಟೆ, ಧಾರವಾಡ, ಬೆಳಗಾವಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದಲ್ಲಿ ಮಂಜು ಬೀಳುವ ಸಾಧ್ಯತೆ ಇದೆ ಎಂದು ಹೇಳಿದೆ. ಜನವರಿ 15ರಿಂದ ಜನವರಿ 17ರವರೆಗೂ ರಾಜ್ಯಾದ್ಯಂತ ಒಣಹವೆ ಇರುವ ಸಾಧ್ಯತೆ ಇದ್ದು, ರಾಜ್ಯದಾದ್ಯಂತ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
Advertisement
ಬೆಂಗಳೂರು: 26-21
ಮಂಗಳೂರು: 31-24
ಶಿವಮೊಗ್ಗ: 31-19
ಬೆಳಗಾವಿ: 31-18
ಮೈಸೂರು: 30-21
ಮಂಡ್ಯ: 29-21
ಮಡಿಕೇರಿ: 28-19
ರಾಮನಗರ: 29-21
ಹಾಸನ: 28-19
ಚಾಮರಾಜನಗರ: 30-21
ಚಿಕ್ಕಬಳ್ಳಾಪುರ: 26-19
ಕೋಲಾರ: 26-19
ತುಮಕೂರು: 28-19
ಉಡುಪಿ: 31-23
ಕಾರವಾರ: 32-22
ಚಿಕ್ಕಮಗಳೂರು: 27-17
ದಾವಣಗೆರೆ: 31-20
ಹುಬ್ಬಳ್ಳಿ: 30-18
ಚಿತ್ರದುರ್ಗ: 28-19
ಹಾವೇರಿ: 31-20
ಬಳ್ಳಾರಿ: 30-20
ಗದಗ: 29-18
ಕೊಪ್ಪಳ: 29-19
ರಾಯಚೂರು: 31-20
ಯಾದಗಿರಿ: 30-19
ವಿಜಯಪುರ: 31-19
ಬೀದರ್: 29-17
ಕಲಬುರಗಿ: 31-19
ಬಾಗಲಕೋಟೆ: 31-19