ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ನಿರಂತರ ಮಳೆ ಸುರಿಯುತ್ತಿದ್ದು, ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಮಳೆಯ ಅಬ್ಬರ ಮುಂದುವರಿದಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕ್ಟೋಬರ್ 20ರ ವರೆಗೆ ರಾಜ್ಯಾದ್ಯಂತ ಮಳೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ, ಉತ್ತರ ಒಳನಾಡು ಹಾಗೂ ಕರಾವಳಿಯ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಒಂದೆರಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಗುಡುಗು ಸಹಿತ ಮಳೆಯಾಗಲಿದೆ. ಆದರೆ ರಾಮನಗರ ಜಿಲ್ಲೆಗೆ ಮಳೆ ಬಿಡುವು ನೀಡಿದ್ದು, ಸಾಧಾರಣ ಬಿಸಿಲಿನ ವಾತಾರಣ ಇರಲಿದೆ. ಕೆಲ ಜಿಲ್ಲೆಯಳಲ್ಲಿ ಬಿಸಿಲು ಸಹಿತ ಮಳೆಯಾಗಲಿದೆ.
ಇಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇದ್ದರೆ, ಉಡುಪಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 27-19
ಮಂಗಳೂರು: 30-24
ಶಿವಮೊಗ್ಗ: 29-21
ಬೆಳಗಾವಿ: 28-21
ಮೈಸೂರು: 29-20
ಮಂಡ್ಯ: 29-20
ಮಡಿಕೇರಿ: 24-17
ರಾಮನಗರ: 28-18
ಹಾಸನ: 27-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 27-19
ಕೋಲಾರ: 27-20
ತುಮಕೂರು: 28-19
ಉಡುಪಿ: 30-24
ಕಾರವಾರ: 31-26
ಚಿಕ್ಕಮಗಳೂರು: 26-19
ದಾವಣಗೆರೆ: 29-21
ಚಿತ್ರದುರ್ಗ: 28-11
ಹಾವೇರಿ: 30-22
ಬಳ್ಳಾರಿ: 30-22
ಗದಗ: 29-22
ಕೊಪ್ಪಳ: 30-22
ರಾಯಚೂರು: 31-22
ಯಾದಗಿರಿ: 31-22
ವಿಜಯಪುರ: 29-22
ಬೀದರ್: 28-21
ಕಲಬುರಗಿ: 30-22
ಬಾಗಲಕೋಟೆ: 30-22