Connect with us

Bengaluru City

ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್

Published

on

ಬೆಂಗಳೂರು: ಬಹುನಿರೀಕ್ಷೆಯ ಸಂಪುಟ ವಿಸ್ತರಣೆ ಡಿಸೆಂಬರ್ 22ರಂದು ನಡೆಯಲಿದ್ದು, ಅಂದು ಸಂಜೆ 5 ಗಂಟೆಗೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.

ರಾಜಭವನದ ಗ್ಲಾಸ್ ಹೌಸ್‍ನಲ್ಲಿ ನೂತನ ಸಚಿವರಿಗೆ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಈ ಸಂಬಂಧ ಅನುಮತಿ ಕೋರಿ ರಾಜ್ಯ ಸರ್ಕಾರವು ರಾಜಭವನಕ್ಕೆ ಮಾಹಿತಿ ರವಾನೆ ಮಾಡಿದೆ.  ಕಾಂಗ್ರೆಸ್ ತನ್ನ ಬಳಿ ಉಳಿಸಿಕೊಂಡಿರುವ 6 ಸ್ಥಾನಕ್ಕೂ ಸಚಿವರನ್ನು ಆಯ್ಕೆ ಮಾಡಲಿದೆ. ಆದರೆ ಜೆಡಿಎಸ್ ಮಾತ್ರ ತನ್ನ ಪಾಲಿನ ಎರಡು ಸ್ಥಾನಗಳಲ್ಲಿ ಒಂದನ್ನು ಹಾಗೆ ಇರಿಸಿಕೊಂಡು ಒಂದು ಸ್ಥಾನವನ್ನು ಭರ್ತಿ ಮಾಡುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

ಈ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕರು ಡಿಸೆಂಬರ್ 21ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ. ಜೊತೆಗೆ ಸಂಪುಟದಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ, ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ಆರ್.ಶಂಕರ್, ಕಾರ್ಮಿಕ ಸಚಿವ ವೆಂಕಟರಮಣಪ್ಪ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರನ್ನು ಕೈಬಿಡುವ ಕುರಿತು ಪತ್ರ ರವಾನಿಸಿದ್ದಾರೆ. ಈ ವಿಚಾರವಾಗಿಯೂ ಸುದೀರ್ಘ ಚರ್ಚೆ ನಡೆಸಲಿದ್ದಾರೆ. ಮಾರನೆಯ ದಿನವೇ ಆಯ್ಕೆ ಪ್ರಕ್ರಿಯೆ ಮುಗಿಸಿ ರಾಜ್ಯಕ್ಕೆ ಆಗಮಿಸಿ ನೂತನ ಸಚಿವರನ್ನು ಪ್ರಮಾಣ ಕಾರ್ಯಕ್ರಮಕ್ಕೆ ಕರೆದುಕೊಂಡು ಹೋಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

https://www.youtube.com/watch?v=kUPiPyBm1SI

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Click to comment

Leave a Reply

Your email address will not be published. Required fields are marked *