ಬೆಂಗಳೂರು: 7ನೇ ವೇತನ ಆಯೋಗ (7th Pay Commission) ಜಾರಿ ವಿಚಾರವಾಗಿ ಸರ್ಕಾರದ ನಡೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ (KSGEA) ತೀವ್ರ ಅಸಮಾಧಾನ ಹೊರಹಾಕಿದೆ. ಸಂಘದ ಬೇಡಿಕೆ ಈಡೇರಿಸದಿದ್ದರೆ ಮಾ.1 ರಿಂದ ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಳ್ಳುವುದಾಗಿ ಕರೆ ನೀಡಿದೆ.
ರಾಜ್ಯ ಬಜೆಟ್ ಮಂಡನೆ ವೇಳೆ ಏಳನೇ ವೇತನ ಆಯೋಗ ಜಾರಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಪ್ರಸ್ತಾಪಿಸದಿರುವುದಕ್ಕೆ ನೌಕರರ ಸಂಘ ಸರ್ಕಾರದ ವಿರುದ್ಧ ಕಿಡಿಕಾರಿದೆ. ಈ ಹಿನ್ನೆಲೆಯಲ್ಲಿ ಸಂಘವು ಮಂಗಳವಾರ ತುರ್ತು ಕಾರ್ಯಕಾರಿಣಿ ಸಭೆ ಕರೆದು ಕೆಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದೆ. ಇದನ್ನೂ ಓದಿ: ಸಿದ್ದರಾಮಯ್ಯ ನಮ್ಮ ನಾಯಕ, ರಾಜ್ಯಕ್ಕೆ ಅನ್ನದಾತ – ಡಿಕೆಶಿ ಗುಣಗಾನ
Advertisement
Advertisement
ಸಂಘದ ಬೇಡಿಕೆಗಳೇನು?
ಏಳನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದು 40% ಫಿಟ್ಮೆಂಟ್‌ನ್ನು ದಿನಾಂಕ 1.07.2022 ರಿಂದ ಜಾರಿಗೆ ತರುವುದು, ರಾಜಸ್ತಾನ, ಛತ್ತೀಸಗಢ, ಜಾರ್ಖಂಡ್, ಪಂಜಾಬ್ ಹಾಗೂ ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಎನ್‌ಪಿಎಸ್ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೆ ತಂದಿರುವಂತೆಯೇ ಕರ್ನಾಟಕ ರಾಜ್ಯದಲ್ಲಿಯೂ ಮಾಡಬೇಕು ಎಂದು ಬೇಡಿಕೆಯಿಟ್ಟಿದೆ.
Advertisement
ಈ ಎರಡು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಏಳು ದಿನಗಳ ಕಾಲಾವಕಾಶ ನೀಡಲಾಗುವುದು. ಬೇಡಿಕೆ ಈಡೇರಿಸದಿದ್ದರೆ ಮಾ.1 ರಿಂದ ರಾಜ್ಯದ ಎಲ್ಲಾ ಸರ್ಕಾರಿ ನೌಕರರು, ನಿಗಮ ಮತ್ತು ಮಂಡಳಿಗಳು ಅನುದಾನಿತ ಸಂಸ್ಥೆಯ ಎಲ್ಲ ನೌಕರರು ಅನಿರ್ದಿಷ್ಟಾವಧಿ ವರೆಗೆ ಕರ್ತವ್ಯಕ್ಕೆ ಗೈರು ಹಾಜರಾಗುವುದರ ಮೂಲಕ ಮುಷ್ಕರ ಮಾಡಲಾಗುವುದು ಎಂದು ಸಂಘವು ತಿಳಿಸಿದೆ. ಇದನ್ನೂ ಓದಿ: ರಾಜ್ಯಾದ್ಯಂತ ಬಿಜೆಪಿ ಡಬಲ್ ಎಂಜಿನ್ ಸರ್ಕಾರಗಳ ಸಾಧನೆ ಸಾರಲಿವೆ `ಪ್ರಗತಿ ರಥ’ – ಎಸ್.ವಿ. ರಾಘವೇಂದ್ರ
Advertisement
ಮಾ.1 ರಿಂದ ಅನಿರ್ಧಿಷ್ಟಾವಧಿ ವರೆಗೆ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮುಂದಾಗಿದೆ. ಇಂದು ಜರುಗಿದ ಕಾರ್ಯಕಾರಿಣಿ ಸಭೆಯಲ್ಲಿ ಮೇಲಿನ ತೀರ್ಮಾನ ಕೈಗೊಳ್ಳಲಾಗಿದೆ.
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k