ಬೆಂಗಳೂರು: ನಗರದಲ್ಲಿ (Bengaluru) ಇವಿ ಬಸ್‌ಗಳಿಂದ (EV Bus) ಸಾಲು ಸಾಲು ಅಪಘಾತಗಳು (Accident) ನಡೆದ ಬೆನ್ನಲ್ಲೇ ಹೊಸ ಎಲೆಕ್ಟ್ರಿಕ್ ಬಸ್ ಖರೀದಿಗೆ ಸಾರಿಗೆ ಇಲಾಖೆ ತಾತ್ಕಾಲಿಕ ಬ್ರೇಕ್ ಹಾಕಿದೆ.
ಇವಿ ಬಸ್ ಚಾಲಕರ ಯಡವಟ್ಟಿಗೆ ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಹಿಂದಿನ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಕೇಂದ್ರಕ್ಕೆ ಪತ್ರ ಬರೆದಿದ್ದರು. ಇವಿ ಬಸ್ ಅವಾಂತರದ ಬಗ್ಗೆ ದಾಖಲೆ ಸಮೇತ ಕೇಂದ್ರದ ಗಮನಕ್ಕೆ ತಂದಿದ್ದರು. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಈಗ ಸಾರಿಗೆ ಇಲಾಖೆ, ಸದ್ಯಕ್ಕೆ ಹೊಸ ಇವಿ ಬಸ್ ಖರೀದಿ ಬೇಡ ಎಂಬ ನಿರ್ಧಾರಕ್ಕೆ ಸರ್ಕಾರ ಬಂದಿದೆ. ಇದನ್ನೂ ಓದಿ: ಕೆಆರ್ ಸರ್ಕಲ್‌ನಲ್ಲಿ ಬಿಎಂಟಿಸಿ ಬಸ್ ಅಪಘಾತ ಪ್ರಕರಣ – ಚಾಲಕನ ವಿರುದ್ಧ FIR ದಾಖಲು
ಇವಿ ಬಸ್ ಅಪಘಾತ – ಅಧ್ಯಯನಕ್ಕೆ ಮುಂದಾದ ಸರ್ಕಾರ
ಪದೇ ಪದೇ ಮರುಕಳಿಸುತ್ತಿರೋ ಇವಿ ಬಸ್ ಅಪಘಾತದ ಬಗ್ಗೆ ಅಧ್ಯಯನಕ್ಕೆ ಸಾರಿಗೆ ಇಲಾಖೆ ಮುಂದಾಗಿದೆ. ಸಾರಿಗೆ ಸಚಿವರ ಸೂಚನೆ ಮೇರೆಗೆ ನಗರದ ಇವಿ ಬಸ್ ಕಾರ್ಯಕ್ಷಮತೆ ಅಧ್ಯಯನ ನಡೆಸಲಿದೆ. ಈ ಬಗ್ಗೆ ಸಾರಿಗೆ ಇಲಾಖೆ ಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ.
ವರದಿ ಆಧಾರಿಸಿ ಮುಂದೆ ಹೊಸ ಇವಿ ಬಸ್ ಖರೀದಿಗೆ ಸರ್ಕಾರ ನಿರ್ಧಾರ ಮಾಡಲಿದೆ. ಸದ್ಯ ರಾಜ್ಯಕ್ಕೆ ಈ ವರ್ಷ ಸುಮಾರು ಒಂದೂವರೆ ಸಾವಿರ ಹೊಸ ಇವಿ ಬಸ್ ಸೇರ್ಪಡೆಯಾಗಬೇಕಿತ್ತು. ಸರ್ಕಾರ ವರದಿ ಕೇಳಿರುವ ಹಿನ್ನೆಲೆ, ಹೊಸ ಇವಿ ಬಸ್ ಖರೀದಿಗೆ ಬ್ರೇಕ್ ಬಿದ್ದಿದೆ. ಇದನ್ನೂ ಓದಿ: ಕೆಆರ್ ಸರ್ಕಲ್‌ನಲ್ಲಿ ಬಿಎಂಟಿಸಿ ಬಸ್ ನಡುವೆ ಸರಣಿ ಅಪಘಾತ – ಚಾಲಕ ಗಂಭೀರ, 13 ಮಂದಿಗೆ ಗಾಯ
