ಬೆಂಗಳೂರು: ಚೀನಾ (China) ಸೇರಿ ಹಲವು ದೇಶಗಳಲ್ಲಿ ಕೋವಿಡ್ (Covid) ಆರ್ಭಟ ಜೋರಾಗಿದ್ದು, ಕೇಂದ್ರ ಸರ್ಕಾರದ ಬೆನ್ನಲ್ಲೇ ರಾಜ್ಯಗಳೂ ಅಲರ್ಟ್ ಆಗಿವೆ. ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿರೋ ಬೆನ್ನಲ್ಲೇ, ಇತ್ತ ರಾಜ್ಯ ಸರ್ಕಾರ ಕೂಡ ಸಿಎಂ ಬೊಮ್ಮಾಯಿ (Basavaraj Bommai) ನೇತೃತ್ವದಲ್ಲಿ ಸಭೆ ಸೇರಿ ಕೆಲವೊಂದು ಮಹತ್ವದ ನಿರ್ಣಯಗಳನ್ನು ಕೈಗೊಂಡಿದ್ದು, ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿಯನ್ನ (Karnataka Covid Guidelines) ಬಿಡುಗಡೆ ಮಾಡಿದೆ.
Advertisement
ಹೊಸ ಮಾರ್ಗಸೂಚಿಯಲ್ಲಿ ಏನಿದೆ?
ಪಬ್, ಬಾರ್, ರೆಸ್ಟೋರೆಂಟ್, ಸಿನಿಮಾ ಹಾಲ್‌ಗಳು, ಶಾಪಿಂಗ್ ಮಾಲ್, ಕಚೇರಿಗಳು ಸೇರಿದಂತೆ ಬಸ್, ರೈಲು, ಮೆಟ್ರೋ, ವಿಮಾನಯಾನ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿರುತ್ತದೆ. ಅದರಲ್ಲೂ ವಿಶೇಷವಾಗಿ ವೃದ್ಧರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು, ಒಳಾಂಗಣದಲ್ಲಿದ್ದಾಗಲೂ ಮಾಸ್ಕ್ ಧರಿಸುವುದು ಉತ್ತಮ. ಇದನ್ನೂ ಓದಿ: ಕೋವಿಡ್ ಪರೀಕ್ಷೆ ಹೆಚ್ಚಿಸಿ.. ಎಲ್ಲರೂ ಮಾಸ್ಕ್ ಧರಿಸಿ – ಮೋದಿ ಸಲಹೆ
Advertisement
Advertisement
ಅರ್ಹರೆಲ್ಲರೂ ಕೋವಿಡ್-19 ಲಸಿಕೆಯ ಬೂಸ್ಟರ್ ಡೋಸ್ ಅನ್ನು ಶೀಘ್ರವಾಗಿ ಪಡೆದುಕೊಳ್ಳಬೇಕು. ಉಸಿರಾಟದ ಸಮಸ್ಯೆ ಹಾಗೂ ಕೋವಿಡ್-19 ಸೋಂಕಿನ ಲಕ್ಷಣಗಳನ್ನು ಹೊಂದಿರುವವರು, ಸ್ವಯಂ ಪ್ರತ್ಯೇಕವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಫಲಿತಾಂಶದ ಆಧಾರದ ಮೇಲೆ ಚಾಲ್ತಿಯಲ್ಲಿರುವ ಪ್ರಮಾಣೀಕೃತ ಶಿಷ್ಠಾಚಾರದ ಅನ್ವಯ ಕ್ರಮಗಳನ್ನು ಪಾಲಿಸುವುದು.
Advertisement
ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಮಧ್ಯಮ ಪ್ರಮಾಣದ ವ್ಯಾಯಾಮ, ಉಸಿರಾಟದ ವ್ಯಾಯಾಮಗಳು ಹಾಗೂ ಧ್ಯಾನವನ್ನು ಮಾಡಬಹುದಾಗಿದೆ. ಮುಂದುವರೆದು, ಸಭೆ ಹಾಗೂ ಸಮಾರಂಭಗಳ ಆಯೋಜಕರು ಈ ಕೆಳಗಿನ ಮಾರ್ಗಸೂಚಿಯನ್ನು ಪಾಲಿಸುವಂತೆ ನಿರೀಕ್ಷಿಸಲಾಗಿದೆ. ಇದನ್ನೂ ಓದಿ: ಪ್ರೇಮಿಗಳ ಸ್ವರ್ಗ ತಾಜ್‌ಮಹಲ್ ಭೇಟಿಗೂ ಕೋವಿಡ್ ಪರೀಕ್ಷೆ ಕಡ್ಡಾಯ
ಸಾರ್ವಜನಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆದಷ್ಟೂ ಹೊರಾಂಗಣದಲ್ಲಿ ಮತ್ತು ಒಳ್ಳೆಯ ಗಾಳಿ ಬೆಳಕಿನ ವ್ಯವಸ್ಥೆ ಇರುವ ಸ್ಥಳಗಳಲ್ಲಿ, ಹಗಲು ಹೊತ್ತಿನಲ್ಲಿ ನಡೆಸುವುದರಿಂದ ಆರೋಗ್ಯದ ಮೇಲೆ ಮುಂಜಾನೆ ಹಾಗೂ ಸಂಜೆಯ ಶೀತ ಗಾಳಿಯ ಪರಿಣಾಮವನ್ನು ತಡೆಗಟ್ಟಬಹುದು. ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದ್ದು, ದೈಹಿಕ ಅಂತರವನ್ನು ಪಾಲಿಸುವುದು ಅಗತ್ಯವಾಗಿದೆ. ಹೆಚ್ಚಿನ ಜನರು ಗುಂಪುಗೂಡುವಿಕೆಯನ್ನು, ವಿಶೇಷವಾಗಿ ಒಳಾಂಗಣಗಳಲ್ಲಿ ಗುಂಪುಗೂಡುವಿಕೆಯನ್ನು ಕಟ್ಟುನಿಟ್ಟಾಗಿ ತಡೆಗಟ್ಟಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.