ಬೆಂಗಳೂರು: ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯದಾದ್ಯಂತ ಬಿಸಿಗಾಳಿ ಹೆಚ್ಚಾಗಿದ್ದು, ಬೇಸಿಗೆಕಾಲದ (Summer Season) ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಈ ಬಾರಿ ಅಧಿಕ ಉಷ್ಣಾಂಶವಿದ್ದು, ಇದರಿಂದಾಗಿ ನಾನಾ ರೀತಿಯ ಅನಾರೋಗ್ಯ ಸಮಸ್ಯೆ ಕಾಡುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುಬೇಕು ಎಂದು ಹೇಳಿದೆ. ಜೊತೆಗೆ ಬೇಸಿಗೆ ಗೈಡ್‌ಲೈನ್ಸ್ ಅನ್ನು ರಾಜ್ಯ ಆರೋಗ್ಯ ಇಲಾಖೆ ಹೊರಡಿಸಿದೆ.
Advertisement
Advertisement
ಆರೋಗ್ಯ ಇಲಾಖೆಯ ಗೈಡ್‌ಲೈನ್ಸ್ ಪ್ರಕಾರ, ಬಾಯಾರಿಕೆ ಇಲ್ಲದಿದ್ದರೂ ಪದೇ ಪದೇ ನೀರು ಕುಡಿಯಬೇಕು. ಪ್ರಯಾಣದ ಸಮಯದಲ್ಲೂ ನೀರು ತೆಗೆದುಕೊಂಡು ಹೋಗಬೇಕು. ಹಣ್ಣು ಮತ್ತು ತರಕಾರಿಗಳನ್ನು ಹೆಚ್ಚು ಸೇವಿಸಬೇಕು. ಕಾಟನ್ ಬಟ್ಟೆ ಧರಿಸುವುದು ಉತ್ತಮವಾಗಿದೆ. ಮಧ್ಯಾಹ್ನ 12 ರಿಂದ 3ರ ವರೆಗಿನ ಬಿಸಿಲಿಗೆ ಹೊರಗಡೆ ಓಡಾಡಬಾರದು. ಇದನ್ನೂ ಓದಿ: ಬರ್ಮುಡಾ ಧರಿಸಿ ರೇಣುಕಾಚಾರ್ಯ ಜಯಂತಿ ಆಚರಿಸಿದ ಸಿಬ್ಬಂದಿ – ಸ್ವಾಮೀಜಿ ಕಾಲಿಗೆ ಬಿದ್ದು ತಹಶೀಲ್ದಾರ್ ಕ್ಷಮೆ
Advertisement
Advertisement
ಸಾಧ್ಯವಾದಷ್ಟು ಮನೆಯ ಕಿಟಕಿಗಳನ್ನು ಓಪನ್ ಮಾಡಿಡಿ. ಅಡುಗೆ ಕೋಣೆಗೆ ವೆಂಟಿಲೇಷನ್ ಖಚಿತಪಡಿಸಿಕೊಳ್ಳಿ. ಹೊರಗಡೆ ಕೆಲಸ ಮಾಡುವವರು ಪ್ರತಿ 20 ನಿಮಿಷಕ್ಕೊಮ್ಮೆ ಬಾಯಾರಿಕೆ ಇಲ್ಲದಿದ್ದರೂ ನೀರು ಕುಡಿಯಬೇಕು. ಮಕ್ಕಳು, ವೃದ್ಧರು, ಸಾಕು ಪ್ರಾಣಿಗಳನ್ನು ಕಾರಿನ ಒಳಗೆ ಕೂರಿಸಿ ಹೊರಗಿಂದ ಲಾಕ್ ಮಾಡಬಾರದು. ಟೀ, ಕಾಫಿ, ಮದ್ಯ ಸೇವಿಸುವುದನ್ನು ಅವಾಯ್ಡ್ ಮಾಡಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರೀತಿಸಿದವಳು ಮತ್ತೊಬ್ಬನೊಂದಿಗೆ ಮದುವೆಯಾಗಿ ಚೆನ್ನಾಗಿರುವುದನ್ನು ಸಹಿಸದೇ ಗೃಹಿಣಿಯ ಕೊಲೆಗೈದ ಪಾಗಲ್ ಪ್ರೇಮಿ