ಬೆಂಗಳೂರು: ರಾಜ್ಯಾದ್ಯಂತ ಸುರಿಯುತ್ತಿದ ಭಾರೀ ಮಳೆಗೆ ವರುಣದೇವ ಕೊಂಚ ವಿರಾಮ ನೀಡಿ ಈಗ ಪುನಃ ಆರ್ಭಟಿಸಲು ಬರುತ್ತಿದ್ದಾನೆ.
ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆಯ ನಿರ್ದೇಶಕರಾದ ಶ್ರೀನಿವಾಸ್ ರೆಡ್ಡಿಯವರು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿ, ಜೂನ್ 22ರಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಹೆಚ್ಚು ಮಳೆ ಬೀಳಲಿದೆ. ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಕಳೆದ ವಾರ ಸುರಿದ ಭಾರೀ ಮಳೆಗೆ ರಾಜ್ಯಾದ್ಯಲ್ಲಿ ಅವಾಂತರಗಳನ್ನು ಸೃಷ್ಟಿಸಿ ಹೋಗಿತ್ತು. ಮಳೆಯಿಂದಾಗಿ ಜನ ತತ್ತರಿಸಿ ಹೋಗಿದ್ದರು. ಈಗಾಗಲೇ ರಾಜ್ಯಾದ್ಯಂತ ಹಲವು ನದಿಗಳು ಮೈದುಂಬಿ ಹರಿಯುತ್ತಿರುವ ಕಾರಣ ಜಲಾಶಯಗಳು ಭಾಗಶಃ ತುಂಬಿವೆ. ಕೊಂಚ ಬಿಡುವ ನೀಡಿದ್ದ ಮಳೆರಾಯ ಈಗ ಪುನಃ ಆರ್ಭಟಿಸಲು ಬರುತ್ತಿದ್ದಾನೆ.