ಬೆಂಗಳೂರು: ರಾಜ್ಯ ಪೊಲೀಸರು (Karnataka State Police) ಇದೀಗ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ (BSNL) ನೆಟ್‌ವರ್ಕ್ ಬಿಟ್ಟು ರಿಲಯನ್ಸ್ ಜಿಯೋಗೆ ಪೋರ್ಟ್ ಆಗಲು ನಿರ್ಧರಿಸಿದ್ದಾರೆ. ಪೊಲೀಸ್ ಇಲಾಖೆ ಬಳಸುತ್ತಿದ್ದ ಬಿಎಸ್‌ಎನ್‌ಎಲ್ ಸಿಮ್‌ಕಾರ್ಡ್ನಿಂದ ಮುಕೇಶ್ ಅಂಬಾನಿ (Mukesh Ambani) ಒಡೆತನದ ಜಿಯೋಗೆ ಶಿಫ್ಟ್ ಆಗಲು ನಿರ್ಧರಿಸಲಾಗಿದೆ.
ಭಾರತ್ ಸಂಚಾರ ನಿಗಮ ನಿಯಮಿತ (BSNL) ರಾಜ್ಯಾದ್ಯಂತ ಸರಿಯಾಗಿ ನೆಟ್‌ವರ್ಕ್ ಸಿಗುತ್ತಿಲ್ಲ, ಇದರಿಂದ ಅಧಿಕಾರಿಗಳ ಸಂಪರ್ಕ ಸಾಧ್ಯವಾಗುತ್ತಿಲ್ಲ ಎಂಬ ಕಾರಣಕ್ಕೆ ರಾಜ್ಯ ಪೊಲೀಸ್ ಇಲಾಖೆ ಈ ಮಹತ್ವದ ನಿರ್ಧಾರ ಕೈಗೊಂಡಿದ್ದು, ಸುಮಾರು 38,347 ಸಿಮ್‌ಕಾರ್ಡ್‌ಗಳನ್ನು (SIM Card) ಬದಲಾಯಿಸಲು ಸರ್ಕಾರ ಅನುಮತಿ ನೀಡಿದೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಓಲಾದಿಂದ 7,614 ಕೋಟಿ ಹೂಡಿಕೆ- ಸಿಎಂ ಸ್ಟಾಲಿನ್ ಸಹಿ
- Advertisement -
- Advertisement -
ಸಿಬ್ಬಂದಿಯ ಅಸ್ತಿತ್ವದಲ್ಲಿರುವ ಮೊಬೈಲ್ ಸಂಖ್ಯೆಯನ್ನು ಉಳಿಸಿಕೊಳ್ಳಲು ಜಿಯೋಗೆ ಪೋರ್ಟ್ ಮಾಡಬೇಕಾಗುತ್ತದೆ. ಬಿಎಸ್‌ಎನ್‌ಎಲ್ ಪೋರ್ಟಿಂಗ್ ಪ್ರಕ್ರಿಯೆಯು ಪೂರ್ವಾಪೇಕ್ಷಿತವಾಗಿದ್ದು, ಮುಂಚಿತವಾಗಿಯೇ ಜಿಯೋ ಸಿಮ್‌ಕಾರ್ಡ್ಗಳನ್ನು ಒದಗಿಸಲಾಗುತ್ತದೆ. ಪ್ರತಿ ಸಿಮ್‌ಕಾರ್ಡ್ನಿಂದ ಪೂರ್ಟ್ ರಿಕ್ವೆಸ್ಟ್ ಸಂಗ್ರಹಿಸುವ ಅಗತ್ಯವಿದ್ದು, ಆರಂಭವಾದ 4 ದಿನಗಳ ಒಳಗೆ ಪ್ರಕ್ರಿಯೆ ಪೂರ್ಣಗೊಳಿಸಬೇಕಾಗುತ್ತದೆ. 38,347 ಸಕ್ರಿಯ ಸಂಪರ್ಕ ಸಂಖ್ಯೆಗಳನ್ನು ಹೊಂದಿರುವುದರಿಂದ ಎಲ್ಲ ಘಟಕಗಳನ್ನು ಒಳಗೊಳ್ಳಲು ಹಂತ ಹಂತವಾಗಿ ಪೋರ್ಟ್ ಪ್ರಕ್ರಿಯೆ ಮಾಡಲಾಗುತ್ತದೆ ಎಂದು ಪೊಲೀಸ್ ಮಹಾನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -
- Advertisement -
38,347 ಸಂಪರ್ಕಗಳಲ್ಲಿ ಹೆಚ್ಚಿನ ಸಂಪರ್ಕ ಸಂಖ್ಯೆಗಳು ಗ್ರಾಮೀಣ ಪ್ರದೇಶಗಳಲ್ಲಿವೆ. ಅಲ್ಲಿ ಉತ್ತಮ ನೆಟ್‌ವರ್ಕ್ ಕೊರತೆ ಕಂಡುಬಂದಿದೆ. ಇದರಿಂದ ಫೋಟೋ, ವೀಡಿಯೋ ಸೇರಿದಂತೆ ಇತರ ದತ್ತಾಂಶಗಳನ್ನು ವರ್ಗಾಯಿಸುವುದು ಕಷ್ಟಸಾಧ್ಯವಾಗುತ್ತಿತ್ತು. ಪೊಲೀಸ್ ತುರ್ತು ಸೇವೆಗಳಿಗಾಗಿ ಲಭ್ಯವಿರುವ ನೆಟ್‌ವರ್ಕ್‌ಗಳ ದಕ್ಷತೆ ಹೆಚ್ಚಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಟ್ವಿಟ್ಟರ್‌ನಂತೆ ಇನ್ನು ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ನಲ್ಲೂ ವೆರಿಫೈಡ್ ಖಾತೆಗಳಿಗೆ ದುಡ್ಡು ಪಾವತಿಸಬೇಕು
ಖಾಸಗಿ ಸಂಸ್ಥೆಗಳು ಈಗಾಗಲೇ 5ಜಿ ಸೇವೆ ನೀಡುತ್ತಿವೆ. ಆದರೆ ಬಿಎಸ್‌ಎನ್‌ಎಲ್ 4ಜಿ ಸೇವೆಯನ್ನೂ ನೀಡುತ್ತಿಲ್ಲ. ಇದರಿಂದ ತುರ್ತು ಸೇವೆಗಳಿಗೆ ಸಮಸ್ಯೆಯಾಗಿದೆ. ಹಾಗಾಗಿ ಸಾರ್ವಜನಿಕ ಸಂಗ್ರಹಣೆಯಲ್ಲಿ ಕರ್ನಾಟಕ ಪಾರದರ್ಶಕ ಕಾಯ್ದೆ 1999ರ ಪ್ರಕಾರ ವಾಣಿಜ್ಯ ಮೌಲ್ಯಮಾಪನದ ನಂತರ ರಿಲಯನ್ಸ್ ಜಿಯೋವನ್ನು ಆಯ್ಕೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k