Connect with us

ರಾಜ್ಯದ ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿಗಳು ಮೇ 23 ವರೆಗೆ ಬಂದ್

ರಾಜ್ಯದ ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿಗಳು ಮೇ 23 ವರೆಗೆ ಬಂದ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಮತ್ತು ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ಲಾಕ್‍ಡೌನ್ ಮಾಡಲಾಗಿದೆ. ಈ ನಡುವೆ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿದ್ದ ಸಬ್ ರಿಜಿಸ್ಟ್ರಾರ್ ಕಚೇರಿಗಳನ್ನು ಕೂಡ ಮೇ 23ರವರೆಗೆ ಬಂದ್ ಮಾಡಲು ಸರ್ಕಾರ ನಿರ್ಧರಿಸಿದೆ.

ಸರ್ಕಾರದ ಆದೇಶದಂತೆ ರಾಜ್ಯದ ಎಲ್ಲ ಉಪನೋಂದಣಿ ಕಚೇರಿಗಳು, ಜಿಲ್ಲಾ ನೋಂದಣಿ ಕಚೇರಿಗಳು ಇಂದಿನವರೆಗೆ ಕಾರ್ಯನಿರ್ವಹಿಸುತ್ತಿದ್ದವು. ಆದರೆ ನಾಳೆಯಿಂದ ಇದನ್ನು ಕೂಡ ಬಂದ್ ಮಾಡಲು ಸರ್ಕಾರ ತೀರ್ಮಾನಿಸಿದೆ. ಈ ನಡುವೆ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ಕೇಂದ್ರ ಸ್ಥಾನದಲ್ಲಿ ಹಾಜರಿರಲು ಸೂಚನೆ ನೀಡಿದೆ.

ನಾಳೆಯಿಂದ ರಾಜ್ಯದಲ್ಲಿನ ಎಲ್ಲಾ ಉಪನೋಂದಣಿ ಕಚೇರಿ ಮತ್ತು ಜಿಲ್ಲಾ ನೋಂದಣಿ ಕಚೇರಿಗಳು ಮೇ 23 ರವರೆಗೆ ಬಾಗಿಲು ಮುಚ್ಚಿರಲಿದೆ.

Advertisement
Advertisement