ರಾಜ್ಯದಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಇದರ ನಡುವೆ ಕೆಲವೆಡೆ ಹಗುರ ಮಳೆಯಾಗುತ್ತಿದೆ. ಇಂದು ಸಹ ರಾಜ್ಯದ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನ ಇರಲಿದೆ. ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಹಾಗೂ ಒಣ ಹವಾಮಾನ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 28-20
ಮಂಗಳೂರು: 29-24
ಶಿವಮೊಗ್ಗ: 29-22
ಬೆಳಗಾವಿ: 27-21
ಮೈಸೂರು: 31-21

ಮಂಡ್ಯ: 31-22
ಮಡಿಕೇರಿ: 23-17
ರಾಮನಗರ: 31-22
ಹಾಸನ: 27-19
ಚಾಮರಾಜನಗರ: 31-21
ಚಿಕ್ಕಬಳ್ಳಾಪುರ: 28-20

ಕೋಲಾರ: 29-21
ತುಮಕೂರು: 28-21
ಉಡುಪಿ: 29-24
ಕಾರವಾರ: 29-25
ಚಿಕ್ಕಮಗಳೂರು: 26-19
ದಾವಣಗೆರೆ: 29-22

ಹುಬ್ಬಳ್ಳಿ: 28-21
ಚಿತ್ರದುರ್ಗ: 28-21
ಹಾವೇರಿ: 29-22
ಬಳ್ಳಾರಿ: 31-23
ಗದಗ: 29-22
ಕೊಪ್ಪಳ: 29-22

ರಾಯಚೂರು: 31-24
ಯಾದಗಿರಿ: 31-24
ವಿಜಯಪುರ:29-23
ಬೀದರ್: 29-22
ಕಲಬುರಗಿ: 31-23
ಬಾಗಲಕೋಟೆ: 29-22



