ಇಂದಿನಿಂದ ಸೆ.28ರವರೆಗೂ ಕರ್ನಾಟಕದಲ್ಲಿ ಮಳೆ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳು, ಮಲೆನಾಡು, ಉತ್ತರ ಒಳನಾಡಿನಲ್ಲಿ ಇಂದಿನಿಂದ 4 ದಿನಗಳ ಕಾಲ ಮಳೆಯ ಅಬ್ಬರ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Advertisement
ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಜಾಸ್ತಿಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಸೆ. 28ರವರೆಗೂ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಇಂದು ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
Advertisement
Advertisement
ಬೆಂಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮಳೆ ಹೆಚ್ಚಾಗಿದೆ. ಬೆಂಗಳೂರು ಮಾತ್ರವಲ್ಲದೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯದಲ್ಲಿ ಇಂದು ಮಳೆಯಾಗಲಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
Advertisement
ನಗರಗಳ ಇಂದಿನ ಹವಾಮಾನ ವರದಿ:
ಬೆಂಗಳೂರು: 28-19
ಮಂಗಳೂರು: 29-25
ಶಿವಮೊಗ್ಗ: 28-22
ಬೆಳಗಾವಿ: 27-21
ಮೈಸೂರು: 28-21
ಮಂಡ್ಯ: 31-21
ರಾಮನಗರ: 33-24
ಮಡಿಕೇರಿ: 22-17
ಹಾಸನ: 26-19
ಚಾಮರಾಜನಗರ: 29-21
ಚಿಕ್ಕಬಳ್ಳಾಪುರ: 28-18
ಕೋಲಾರ: 30-20
ತುಮಕೂರು: 29-20
ಉಡುಪಿ: 29-25
ಕಾರವಾರ: 29-25
ಚಿಕ್ಕಮಗಳೂರು: 25-19
ದಾವಣಗೆರೆ: 29-22
ಚಿತ್ರದುರ್ಗ: 28-21
ಹಾವೇರಿ: 29-22
ಬಳ್ಳಾರಿ: 29-23
ಗದಗ: 28-21
ಕೊಪ್ಪಳ: 29-22
ರಾಯಚೂರು: 27-23
ಯಾದಗಿರಿ: 27-23
ವಿಜಯಪುರ: 26-21
ಬೀದರ್: 25-21
ಕಲಬುರಗಿ: 26-22
ಬಾಗಲಕೋಟೆ: 27-22