– ಹೆಚ್ಡಿಕೆ ಮನೆಯಲ್ಲೇ ಮೊಬೈಲ್ ವ್ಯವಹಾರ: ನಗರ ಪೊಲೀಸ್ ಆಯುಕ್ತರ ಹೇಳಿಕೆ
– ಕುಮಾರಸ್ವಾಮಿಗೆ ನೋಟಿಸ್ ಕೊಡುವ ಸಾಧ್ಯತೆ?
ಬೆಂಗಳೂರು: ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣಕ್ಕೆ (Sting Operation) ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ ಇದೇ ಮೊದಲ ಬಾರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಅವರ ಹೆಸರನ್ನು ಪೊಲೀಸರು ಪ್ರಸ್ತಾಪಿಸಿದ್ದಾರೆ.
ಪ್ರಕರಣ ಸಂಬಂಧ ಸುದ್ದಿಗಾರರೊಂದಿಗೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾತನಾಡಿ, ಕೇಂದ್ರ ಸಚಿವ ಕುಮಾರಸ್ವಾಮಿ ಅವರ ವಿಳಾಸದಲ್ಲಿ ರಿತೇಶ್ ಪಾಂಡೆ ಇದ್ದರು. ಪ್ರಜ್ವಲ್ ಪ್ರಸಾದ್ ಅವರ ಸೂಚನೆ ಮೇರೆಗೆ ವಿಡಿಯೋ ಅಪ್ಲೋಡ್ ಆಗಿದೆ. ರಿತೀಶ್ ಮತ್ತು ಪ್ರಜ್ವಲ್ ಪ್ರಸಾದ್ಗೆ ಹಣ ವರ್ಗಾವಣೆ ಆಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕುಮಾರಸ್ವಾಮಿಯೇ ಮಾಡಿಸಿರೋದು: ಪುಟ್ಟರಂಗಶೆಟ್ಟಿ ಗಂಭೀರ ಆರೋಪ
ಪ್ರಜ್ವಲ್ ಪ್ರಸಾದ್ ಅವರ ಬಂಧನ ಬಳಿಕ ಮಾಹಿತಿ ತಿಳಿಯಲಿದೆ. ಪ್ರಜ್ವಲ್ ಪ್ರಸಾದ್, ಕುಮಾರಸ್ವಾಮಿ ಅವರ ಅಧಿಕೃತ ಮನೆಗೆ ಕೊಟ್ಟಿದ್ದಾರೆ. ಕೇಂದ್ರ ಸಚಿವರ ಮನೆಯಲ್ಲೇ ಮೊಬೈಲ್ ಎಕ್ಸ್ಚೇಂಜ್ ಆಗಿದೆ. ವಿನೋದ್ ಶರ್ಮ ಮತ್ತು ಪ್ರಜ್ವಲ್ ನಾಪತ್ತೆ ಆಗಿದ್ದಾರೆ. ಅವರ ಬಂಧನದ ಬಳಿಕ ಬೇರೆ ಅವರ ಪಾತ್ರದ ಬಗ್ಗೆ ಗೊತ್ತಾಗಲಿದೆ ಎಂದು ಆಯುಕ್ತರು ಹೇಳಿದರು.
