ಬೆಂಗಳೂರು: ರೈಲು ವಿಳಂಬದಿಂದ ನೀಟ್ ಪರೀಕ್ಷೆ ವಂಚಿತರಾಗಿದ್ದ ವಿದ್ಯಾರ್ಥಿಗಳಿಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಿಹಿಸುದ್ದಿ ನೀಡಿದೆ.
ಹಂಪಿ ಎಕ್ಸ್‍ಪ್ರೆಸ್ ರೈಲು ವಿಳಂಬದಿಂದ ನೀಟ್ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲು ಅವಕಾಶ ನೀಡಲಾಗುತ್ತದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಟ್ವೀಟ್ ಮಾಡಿದ್ದಾರೆ.
Advertisement
ಸಿಎಂ ಕುಮಾರಸ್ವಾಮಿ ಅವರು, ರೈಲು ವಿಳಂಬದಿಂದಾಗಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿಲ್ಲ. ಹೀಗಾಗಿ ಆ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಿ ಎಂದು ಕೇಂದ್ರ ಮಾನವ ಸಂಪನ್ಮೂಲ ಇಲಾಖೆಗೆ ಮನವಿ ಮಾಡಿಕೊಂಡಿದ್ದರು.
Advertisement
Happy to announce that #Karnataka Students who missed #NEET exam , due to railway delay will get another chance.@MoHFW_INDIA @HRDMinistry @PIB_India @MIB_India @DG_NTA @cbseindia29 @ciet_ncert @DDNewsLive @airnewsalerts @DVSBJP@CMofKarnataka
— Prakash Javadekar (@PrakashJavdekar) May 6, 2019
Advertisement
ಕುಮಾರಸ್ವಾಮಿ ಅವರ ಮನವಿ ಮೇರೆಗೆ ರೈಲು ವಿಳಂಬದಿಂದಾಗಿ ಪರೀಕ್ಷೆಯಿಂದ ವಂಚಿತರಾದ ವಿದ್ಯಾರ್ಥಿಗಳಿಗೆ ಮಾತ್ರ ಮರು ಪರೀಕ್ಷೆ ನಡೆಸಲು ಕೇಂದ್ರ ಸಚಿವರು ಒಪ್ಪಿಗೆ ಸೂಚಿಸಿದ್ದಾರೆ. ಕೇಂದ್ರ ಸಚಿವರು ಅವರು ಟ್ವೀಟ್ ಮೂಲಕ ಸ್ಪಷ್ಟನೆ ನೀಡುತ್ತಿದ್ದಂತೆ ಸಿಎಂ ಕೂಡ ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ್ದಾರೆ.
Advertisement
ರಾಜ್ಯ ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿ ನೀಟ್ ಪರೀಕ್ಷೆಯು ಭಾನುವಾರ ನಡೆಯಿತು. ಬಳ್ಳಾರಿಯಿಂದ ಬೆಂಗಳೂರಿಗೆ ಪರೀಕ್ಷೆಗೆ ಬರಬೇಕಾಗಿದ್ದ ಕೆಲ ವಿದ್ಯಾರ್ಥಿಗಳು ನಗರಕ್ಕೆ ಆಗಮಿಸಲು ಹಂಪಿ ಎಕ್ಸ್ ಪ್ರೆಸ್ ರೈನಲ್ಲಿ ಪ್ರಯಾಣ ಬೆಳೆಸಿದ್ದರು. ಆದರೆ ಭಾನುವಾರ ಬೆಳಗ್ಗೆ 6 ಗಂಟೆಗೆ ನಗರಕ್ಕೆ ಆಗಮಿಸಿದ ಬೇಕಿದ್ದ ರೈಲು 8 ಗಂಟೆ ತಡವಾಗಿ ಆಗಮಿಸಿತ್ತು. ಇದರಿಂದ ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದರು.
Thank you @PrakashJavdekar and @HRDMinistry for considering the request and helping our students.@hd_kumaraswamy #NEET https://t.co/XuFDAzHCkp
— CM of Karnataka (@CMofKarnataka) May 6, 2019