ಬೆಂಗಳೂರು: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.
Advertisement
ಬಂಗಾಳಕೊಲ್ಲಿ ಮತ್ತು ಅರಬೀ ಸಮುದ್ರದಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತ ಹಿನ್ನೆಲೆ ಮೋಡ ಕವಿದ ವಾತಾವರಣ ಇರಲಿದ್ದು, ರಾಜ್ಯದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಇನ್ನೂ ಕರಾವಳಿ ಮತ್ತು ಮಲೆನಾಡು ಭಾಗದಲ್ಲೂ ಸಾಧಾರಣ ಮಳೆಯಾಗಲಿದ್ದು, ಬೆಂಗಳೂರಿನಲ್ಲಿ ಶೀತಗಾಳಿ ಬೀಸುತ್ತಿದ್ದು, ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಾಗಲಿದೆ ಎಂದು ಹವಾಮಾನ ತಙ್ಞರು ತಿಳಿಸಿದ್ದಾರೆ. ಇದನ್ನೂ ಓದಿ: ಆಂಧ್ರ, ಒಡಿಶಾಗೆ ಚಂಡಮಾರುತ ಅಪ್ಪಳಿಸುವ ಭೀತಿ- ಮುಂಬೈನಲ್ಲಿ ಭಾರಿ ಮಳೆ ಸಾಧ್ಯತೆ
Advertisement
Advertisement
ಮತ್ತೊಂದೆಡೆ ಉತ್ತರ ಗುಜರಾತ್, ಉತ್ತರ ಮತ್ತು ವಾಯುವ್ಯ ಮಹಾರಾಷ್ಟ್ರದಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮಳೆಯಿಂದಾಗಿ ಪಾಲ್ಘರ್, ಥಾಣೆ, ಮುಂಬೈನಲ್ಲಿ ಹೆಚ್ಚು ಹಾನಿಯಾಗುವ ಸಾಧ್ಯತೆ ಇದೆ. ಡಿ.4ರಂದು ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿಗೆ ಚಂಡಮಾರುತ ಅಪ್ಪಳಿಸಲಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್ – ಇಂದಿನಿಂದ ಆಟೋ ದರ ಕಾಸ್ಟ್ಲಿ
Advertisement