ಬೆಂಗಳೂರು: ಮೋಟಾರು ವಾಹನ ತಿದ್ದುಪಡಿ ಕಾಯ್ದೆಯ ಅನ್ವಯ ಭಾರೀ ದಂಡ ವಿಧಿಸುತ್ತಿದ್ದ ಸರ್ಕಾರ ನಡೆಗೆ ಸಾಕಷ್ಟು ಜನರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದರ ನಡುವೆಯೇ ಗುಜರಾತ್ ಸರ್ಕಾರ ದಂಡದ ಮೊತ್ತವನ್ನು ಕಡಿಮೆ ಮಾಡಿತ್ತು. ಸದ್ಯ ಕರ್ನಾಟಕದಲ್ಲೂ ದಂಡದ ಪ್ರಮಾಣ ಕಡಿಮೆ ಮಾಡಲು ಸಿಎಂ ಬಿಎಸ್ವೈ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.
Advertisement
ಈ ಬಗ್ಗೆ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು, ದಂಡದ ಮೊತ್ತ ಜಾಸ್ತಿಯಾಗಿರುವ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಬೇರೆ ಬೇರೆ ರಾಜ್ಯಗಳಲ್ಲಿ ಕಡಿಮೆ ಮಾಡಿರುವಂತೆ ನಮ್ಮಲ್ಲೂ ಕಡಿತ ಮಾಡುವ ಯೋಚನೆ ಇದೆ. ಈಗಾಗಲೇ ಹಿರಿಯ ಅಧಿಕಾರಿಗಳಿಗೆ ಬೇರೆ ಬೇರೆ ರಾಜ್ಯಗಳಿಂದ ಮಾಹಿತಿ ಪಡೆಯಲು ಸೂಚನೆ ನೀಡಿದ್ದೇವೆ. 2 ದಿನಗಳ ಒಳಗೆ ಈ ಮಾಹಿತಿ ಲಭಿಸುವ ನಿರೀಕ್ಷೆ ಇದ್ದು, ಮಾಹಿತಿ ಬಂದ ಕೂಡಲೇ ಕ್ರಮಕೈಗೊಳ್ಳುತ್ತೇನೆ. ಸದ್ಯದ ಪರಿಸ್ಥಿತಿಯಲ್ಲಿ ಅಧಿಕಾರಿಗಳಿಗೆ ನೀಡಬೇಕಾದ ಕೆಲ ಸೂಚನೆಗಳನ್ನ ನೀಡಿದ್ದೇವೆ ಎಂದು ಹೇಳಿದರು. ಇದನ್ನು ಓದಿ: ದುಬಾರಿ ಟ್ರಾಫಿಕ್ ದಂಡಕ್ಕೆ ಗುಜರಾತ್ ಸರ್ಕಾರದಿಂದ ಬ್ರೇಕ್
Advertisement
Advertisement
ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿದವರಿಗೆ ದುಬಾರಿ ದಂಡ ವಿಧಿಸುತ್ತಿರುವ ಬಗ್ಗೆ ಸಾರ್ವಜನಿಕ ವಲಯದಿಂದ ಭಾರೀ ಆಕ್ಷೇಪ ಕೇಳಿಬರುತ್ತಿತ್ತು. ಇದೇ ವೇಳೆ ಗುಜರಾತ್ ಸಿಎಂ ವಿಜಯ್ ರೂಪಾಣಿ ಅವರು, ಹೊಸ ಕಾಯ್ದೆಯಲ್ಲಿ ವಿಧಿಸುತ್ತಿರುವ ದಂಡದ ಮೊತ್ತ ಗರಿಷ್ಠ ಪ್ರಮಾಣದಲ್ಲಿದ್ದು, ಈ ಬಗ್ಗೆ ಚರ್ಚೆ ನಡೆಸಿ ಕೆಲ ದಂಡದ ಮೊತ್ತಗಳನ್ನು ಕಡಿಮೆ ಮಾಡಲಾಗಿದೆ ಎಂದು ಹೇಳಿದ್ದರು. ಇದನ್ನು ಓದಿ: ಸಿದ್ಧಪಡಿಸಿಕೊಂಡ ನೆಟ್ಟಿಗರು- ವೈರಲಾಯ್ತು ವಿಡಿಯೋ
Advertisement
ಗುಜರಾತ್ ಸರ್ಕಾರದ ಹೊಸ ನಿಯಮಗಳಂತೆ ಹೆಲ್ಮೆಟ್ ಧರಿಸದಿದ್ದರೆ 500 ರೂ. ದಂಡವನ್ನು ನಿಗದಿ ಮಾಡಲಾಗಿದೆ. ಕೇಂದ್ರ ಸರ್ಕಾರ ಸೆ.1ರಿಂದ ಜಾರಿ ಮಾಡಿದ್ದ ಹೊಸ ತಿದ್ದುಪಡಿ ಕಾಯ್ದೆಯ ಅನ್ವಯ ಈ ಮೊತ್ತ 1 ಸಾವಿರ ರೂ. ಇತ್ತು. ಸೀಟ್ ಬೆಲ್ಟ್ ಧರಿಸದಿದ್ದರೆ 1 ಸಾವಿರ ಬದಲಾಗಿ 500 ರೂ., ಡ್ರೈವಿಂಗ್ ಲೈಸೆನ್ಸ್ ಇಲ್ಲದಿದ್ದರೆ ದ್ವಿಚಕ್ರ ವಾಹನ ಸವಾರರಿಗೆ 2 ಸಾವಿರ ರೂ., ಉಳಿದ ವಾಹನಗಳಿಗೆ 3 ಸಾವಿರ ರೂ. ನಿಗದಿ ಮಾಡಲಾಗಿದೆ. ಆದರೆ ಲೈಸನ್ಸ್, ಆರ್ ಸಿ, ವಿಮೆ ಮೊದಲ ಬಾರಿಗೆ ಇಲ್ಲದಿದ್ದರೆ 500 ರೂ. ದಂಡ ವಿಧಿಸಿದರೆ, 2ನೇ ಬಾರಿಗೆ ಈ ಮೊತ್ತ ಕೇಂದ್ರ ಸರ್ಕಾರ ನೀತಿಗೆ ಅಡಿ ಅನ್ವಯವಾಗಲಿದೆ. ತ್ರಿಬಲ್ ರೈಡಿಂಗ್ ಮಾಡುವವರಿಗೆ ವಿಧಿಸಲಾಗುತ್ತಿದ್ದ 1 ಸಾವಿರ ರೂ. ದಂಡವನ್ನು 100 ರೂ.ಗಳಿಗೆ ಕಡಿಮೆ ಮಾಡಲಾಗಿದೆ. ಮಾಲಿನ್ಯ ಪ್ರಮಾಣ ಪತ್ರ ಪಡೆಯದ ವಾಹನಗಳಿಗೆ ನಿಗದಿ ಮಾಡಿದ್ದ 10 ಸಾವಿರಗಳನ್ನು ಸಣ್ಣ ವಾಹನಗಳಿಗೆ 1 ಸಾವಿರ ರೂ. ಭಾರೀ ವಾಹನಗಳಿಗೆ 3 ಸಾವಿರ ರೂ.ಗೆ ಇಳಿಸಲಾಗಿದೆ. ಇದನ್ನು ಓದಿ: ಟ್ರಾಫಿಕ್ ರೂಲ್ಸ್ ಉಲ್ಲಂಘನೆ- ಬೈಕಿಗೆ 23, 24 ಸಾವಿರ ರೂ, ಆಟೋಗೆ 32 ಸಾವಿರ ರೂ. ದಂಡ