ಬೆಂಗಳೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು ಎಚ್‍ಡಿಕೋಟೆ ಯಲ್ಲಿರುವ ಕಬಿನಿ ಡ್ಯಾಂ ನಿಂದ ದಾಖಲೆ ಪ್ರಮಾಣದಲ್ಲಿ ನೀರನ್ನು ಹೊರಗೆ ಬಿಡಲಾಗಿದೆ.
1992 ರ ನಂತರ ಇದೇ ಮೊದಲ ಬಾರಿಗೆ 70 ಸಾವಿರ ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗಿದೆ. ಹಾಗೆಯೇ ಕೆಆರ್ ಎಸ್ ಅಣೆಕಟ್ಟಿನಿಂದಲೂ 40 ಸಾವಿರ ಕ್ಯೂಸೆಕ್ ನೀರನ್ನು ಕ್ರಸ್ಟ್ ಗೇಟ್ ಮೂಲಕ ಹೊರಕ್ಕೆ ಬಿಡಲಾಗಿದ್ದು, ಈ ಮೂಲಕ ಕಾವೇರಿ ಕೊಳ್ಳದ ಕೇವಲ 2 ಜಲಾಶಯಗಳಿಂದಲೇ 1 ಲಕ್ಷ ಕ್ಯೂಸೆಕ್ ನೀರು ನದಿಗೆ ಸೇರುತ್ತಿದೆ.
Advertisement
Advertisement
ಮಲೆನಾಡು, ಕರಾವಳಿಯಲ್ಲಿ ಕಳೆದ ಎರಡು ವಾರಗಳಿಂದ ಬಿಡುವು ನೀಡಿದ್ದ ಮಳೆರಾಯ ಈಗ ಮತ್ತೆ ಅಬ್ಬರಿಸ್ತಿದ್ದಾನೆ. ಮಂಗಳೂರಿನಲ್ಲೂ ಭಾರೀ ವರ್ಷಧಾರೆಯಿಂದ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಬೆಳ್ತಂಗಡಿ ತಾಲೂಕಿನ ಶಿಶಿಲೇಶ್ವರ ದೇವಸ್ಥಾನ ಸಂಪೂರ್ಣ ಜಲಾವೃತವಾಗಿದೆ. ಇನ್ನು ಜಿಲ್ಲೆಯ ಪುಂಜಾಲಕಟ್ಟೆ ಸಮೀಪದ ಮೂರ್ಜೆ ಎಂಬಲ್ಲಿ ಭಾರೀ ಮಳೆಗೆ ಅಂಗನವಾಡಿ ಒಂದರ ಬಳಿ ಮಣ್ಣು ಕುಸಿದು ಆತಂಕ ಎದುರಾಗಿದೆ. ಚಿಕ್ಕಮಗಳೂರಿನಲ್ಲೂ ಧಾರಾಕಾರ ಮಳೆ ಸುರಿಯುತ್ತಿರೋದ್ರಿಂದ ತುಂಗಾ, ಭದ್ರಾ ಹಾಗೂ ಹೇಮಾವತಿ ಜಲಾಶಯಗಳ ಒಳಹರಿವು ಹೆಚ್ಚಾಗಿದೆ. ಕಳಸಾ ಹೊರನಾಡಿಗೆ ಸಂಪರ್ಕ ಕಲ್ಪಿಸೋ ಹೆಬ್ಬಾಳೆ ಸೇತುವೆ ಮತ್ತೊಮ್ಮೆ ಮುಳುಗಡೆಯಾಗಿದ್ದು ಪ್ರವಾಸಿಗರು ಪರದಾಡೋ ಸ್ಥಿತಿ ನಿರ್ಮಾಣವಾಗಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews