ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ (Karnataka Maharshi Valmiki Scheduled Tribe Development Corporation Ltd) ಅಕ್ರಮವಾಗಿ ಸಹಕಾರಿ ಬ್ಯಾಂಕ್‌ಗೆ ವರ್ಗಾವಣೆಯಾಗಿದ್ದ 45 ಕೋಟಿ ರೂ. ಹಣವನ್ನು ವಿಶೇಷ ತನಿಖಾ ತಂಡ (SIT) ಸೀಝ್ ಮಾಡಿದೆ.
ನಿಗಮದಿಂದ ಹೈದರಾಬಾದ್‌ನಲ್ಲಿರುವ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕಿಗೆ ಒಟ್ಟು 94.73 ಕೋಟಿ ರೂ. ವರ್ಗಾವಣೆಯಾಗಿತ್ತು. ಈಗಾಗಲೇ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್ ಮಾಲೀಕ ಸತ್ಯನಾರಾಯಣ್ ಅವರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಅಣ್ಣಾಮಲೈ ಫೋಟೋ ಹಾಕಿ ನಡು ರಸ್ತೆಯಲ್ಲಿ ಮೇಕೆ ತಲೆ ಕತ್ತರಿಸಿ ಸಂಭ್ರಮಿಸಿದ ಡಿಎಂಕೆ ಕಾರ್ಯಕರ್ತರು
ಸಹಕಾರಿ ಬ್ಯಾಂಕ್‌ನ 18 ನಕಲಿ ಖಾತೆಗಳಿಗೆ ವರ್ಗಾವಣೆಯಾಗಿದ್ದ 94.73 ಕೋಟಿ ರೂ ಪೈಕಿ ಬಹುಪಾಲು ಹಣ ಡ್ರಾ ಮಾಡಲಾಗಿದೆ. ಉಳಿದ ಹಣ ಎಲ್ಲಿಗೆ ಹೋಗಿದೆ ಎಂಬುದರ ಕುರಿತು ಎಸ್‌ಐಟಿ ತನಿಖೆ ಮುಂದುವರಿಸಿದೆ.
ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪದ್ಮನಾಭ, ಪರಶುರಾಮ್, ನೆಕ್ಕುಂಟಿ ನಾಗರಾಜ್, ನಾಗೇಶ್ವರ ರಾವ್, ಸತ್ಯನಾರಾಯಣ ಬಂಧನ ಮಾಡಿದ ಎಸ್‌ಐಟಿ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ ಕೋಟ್ಯಂತರ ಹಗರಣ – ಇಂದೇ ನಾಗೇಂದ್ರ ರಾಜೀನಾಮೆ ಸಾಧ್ಯತೆ!