ಬೆಂಗಳೂರು: ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಇಂದು ಕೆಪಿಸಿಸಿ(KPCC) ಕಚೇರಿಯಲ್ಲಿ ವಿಧಾನಸಭಾ ಚುನಾವಣೆಯ ಟಿಕೆಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಸಿದ್ದರಾಮಯ್ಯ ಪರವಾಗಿ ಅವರ ಆಪ್ತ ಸಹಾಯಕ ವೆಂಕಟೇಶ್ ಕಾಂಗ್ರೆಸ್ ಕಚೇರಿ ಕಾರ್ಯದರ್ಶಿ ಎಲ್ ನಾರಾಯಣ್ ಅವರಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಸಿದ್ದರಾಮಯ್ಯ ಅರ್ಜಿ ಬೇರೆಲ್ಲ ನಾಯಕರ ಅರ್ಜಿಗಿಂತ ಭಿನ್ನವಾಗಿದ್ದು ಯಾವುದೇ ಕ್ಷೇತ್ರದ ಟಿಕೆಟ್ ಕೇಳಿಲ್ಲ. ತಮಗೆ ಯಾವ ಕ್ಷೇತ್ರದ ಟಿಕೆಟ್ ನೀಡಬೇಕು ಎಂಬ ಜವಾಬ್ದಾರಿಯನ್ನು ಹೈಕಮಾಂಡ್‌ಗೆ(High Command) ಬಿಟ್ಟಿದ್ದಾರೆ. ಇದನ್ನೂ ಓದಿ: ಶೀಲ ಶಂಕಿಸಿ ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿ ದಟ್ಟ ಕಾಡಲ್ಲಿ ಹೂತಾಕಿದ ಪತಿ – ತಿಂಗಳ ಹಿಂದೆಯೇ ಪ್ಲಾನ್
Advertisement
Advertisement
ಅರ್ಜಿಯಲ್ಲಿ ಹೈಕಮಾಂಡ್ ಸೂಚನೆ ಮೇರೆಗೆ ಕ್ಷೇತ್ರ ಆಯ್ಕೆ ಎಂದು ಬರೆಯಲಾಗಿದೆ. ಕ್ಷೇತ್ರದ ಹೆಸರು ಬರೆಯದೆ ಅರ್ಜಿ ಸಲ್ಲಿಕೆ ಮಾಡಿದ ಸಿದ್ದರಾಮಯ್ಯ ನಡೆ ನಿಗೂಢವಾಗಿದೆ.
Advertisement
ಈ ಹಿಂದೆ ಸಿದ್ದರಾಮಯ್ಯ ಬಾದಾಮಿ, ಕೋಲಾರ, ವರುಣಾ ಕ್ಷೇತ್ರದ ಪೈಕಿ ಒಂದು ಕಡೆ ಸ್ಪರ್ಧಿಸಲಿದ್ದಾರೆ ಎನ್ನಲಾಗಿತ್ತು. ಆದರೆ ಕೋಲಾರ ಭೇಟಿಯ ವೇಳೆ ಬಾದಾಮಿಯಲ್ಲಿ ನಿಲ್ಲುವುದಿಲ್ಲ ಎಂದು ಪ್ರಕಟಿಸಿದ್ದರು. ಹೀಗಾಗಿ ಕೋಲಾರ, ವರುಣಾ ಪೈಕಿ ಎಲ್ಲಿ ಸ್ಪರ್ಧೆ ಮಾಡುತ್ತಾರೆ ಎನ್ನುವುದೇ ಸದ್ಯದ ಕುತೂಹಲ.
Advertisement
ಕಾಂಗ್ರೆಸ್ ಟಿಕೆಟ್‌ಗೆ ಅರ್ಜಿ ಸಲ್ಲಿಕೆಗೆ ನವೆಂಬರ್ 15 ಕೊನೆಯ ದಿನವಾಗಿತ್ತು. ಆದರೆ ಸಿದ್ದರಾಮಯ್ಯ ಸೇರಿದಂತೆ ಘಟಾನುಘಟಿ ನಾಯಕರು ಅರ್ಜಿ ಸಲ್ಲಿಸಿರಲಿಲ್ಲ. ಅಷ್ಟೇ ಅಲ್ಲದೇ ಕೊನೆಯ ಕ್ಷಣದಲ್ಲಿ ಟಿಕೆಟ್ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ನ.21ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು.