Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತಗಳ್ಳತನದ ಬಗ್ಗೆ ಮೊದಲು ಪತ್ತೆ ಹಚ್ಚಿದ್ದೇ ಕರ್ನಾಟಕದಲ್ಲಿ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಮತಗಳ್ಳತನದ ಬಗ್ಗೆ ಮೊದಲು ಪತ್ತೆ ಹಚ್ಚಿದ್ದೇ ಕರ್ನಾಟಕದಲ್ಲಿ: ಡಿಕೆಶಿ

Karnataka

ಮತಗಳ್ಳತನದ ಬಗ್ಗೆ ಮೊದಲು ಪತ್ತೆ ಹಚ್ಚಿದ್ದೇ ಕರ್ನಾಟಕದಲ್ಲಿ: ಡಿಕೆಶಿ

Public TV
Last updated: November 10, 2025 5:58 pm
Public TV
Share
3 Min Read
DK Shivakumar 5
SHARE

– ಚುನಾವಣೆ ಆಯೋಗದಿಂದಲೂ ಅನ್ಯಾಯ
– ಕುಮಾರಸ್ವಾಮಿ ಅವರೂ ಭಯೋತ್ಪಾದಕರ ಒಂದು ಭಾಗವೇ?

ನವದೆಹಲಿ: ಚುನಾವಣೆಗಳಲ್ಲಿ ಮತಗಳ್ಳತನ (Vote Theft) ನಡೆಯುತ್ತಿರುವ ಬಗ್ಗೆ ಮೊದಲು ಪತ್ತೆ ಹಚ್ಚಿದ್ದೇ ಕರ್ನಾಟಕದಲ್ಲಿ. ಈಗ ಮಹಾರಾಷ್ಟ್ರ, ಹರಿಯಾಣ, ಬಿಹಾರದಲ್ಲಿ ನಡೆಸಿರುವ ಅಕ್ರಮಗಳು ಬೆಳಕಿಗೆ ಬಂದಿವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು.

ದೆಹಲಿಯಲ್ಲಿ ಎಐಸಿಸಿ ನೂತನ ಕಟ್ಟಡ ಇಂದಿರಾ ಭವನದ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಾಂಕೇತಿಕವಾಗಿ ಸಹಿ ಸಂಗ್ರಹ ಅಭಿಯಾನದ ದಾಖಲೆಗಳನ್ನು ಹಸ್ತಾಂತರಿಸಿದ್ದೇವೆ. 100 ವರ್ಷಗಳ ಹಿಂದೆ ಮಹಾತ್ಮ ಗಾಂಧೀಜಿ ಅವರು ನಿಭಾಯಿಸಿದ್ದ ಜವಾಬ್ದಾರಿಯನ್ನು ಈಗ ನಮ್ಮ ರಾಜ್ಯದ ಮಲ್ಲಿಕಾರ್ಜುನ ಖರ್ಗೆ ಅವರು ನಿಭಾಯಿಸುತ್ತಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಮತದಾನದ ಹಕ್ಕು ರಕ್ಷಣೆ ಹೋರಾಟ ಮಾಡಿದ್ದೇವೆ. ಒಬ್ಬರಿಗೆ ಒಂದು ಮತ ಎಂದು ನಾವು ಹೋರಾಟ ಮಾಡುತ್ತಿದ್ದೇವೆ. ಮತಗಳ್ಳತನವನ್ನು ಮೊದಲು ಪತ್ತೆಹಚ್ಚಿದ್ದೇ ನಮ್ಮ ರಾಜ್ಯದಲ್ಲಿ. ಎಐಸಿಸಿ ಸಂಶೋಧನಾ ವಿಭಾಗ, ನಮ್ಮ ಅಭ್ಯರ್ಥಿಯಾಗಿದ್ದ ಮನ್ಸೂರ್ ಅಲಿ ಖಾನ್, ಕೆಪಿಸಿಸಿ ತಂಡ ಸೇರಿ ಈ ಮತಗಳ್ಳತನ ಪತ್ತೆ ಮಾಡಿ ಎಐಸಿಸಿಗೆ ಮಾಹಿತಿ ನೀಡಿದೆವು ಎಂದು ವಿವರಿಸಿದರು. ಇದನ್ನೂ ಓದಿ: ವೋಟ್‌ ಚೋರಿ ವಿರುದ್ಧ ಅಭಿಯಾನ; ರಾಜ್ಯದ 1,12,41,000 ಸಹಿಗಳನ್ನ AICCಗೆ ಹಸ್ತಾಂತರಿಸಿದ ಡಿಕೆಶಿ

DK Shivakumar 4

ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿಗೆ ಆಗಮಿಸಿ ಫ್ರೀಡಂ ಪಾರ್ಕ್‌ನಿಂದ ಈ ಹೋರಾಟ ಆರಂಭಿಸಲಾಯಿತು. ನಂತರ ಮಹಾರಾಷ್ಟ್ರ, ಹರಿಯಾಣ ಚುನಾವಣಾ ಅಕ್ರಮ ಬಯಲಾಗಿ ಈ ಹೋರಾಟ ಬಿಹಾರದವರೆಗೂ ಹಬ್ಬಿತು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಅವರ ನಿರ್ದೇಶನದ ಮೇರೆಗೆ ಈ ಅಭಿಯಾನ ಪೂರ್ಣಗೊಳಿಸಿದ್ದೇವೆ ಎಂದರು. ಇದನ್ನೂ ಓದಿ: ಜೆಡಿಎಸ್ ಕೋರ್ ಕಮಿಟಿ ಸ್ಥಾನದಿಂದ ಜಿಟಿ ದೇವೇಗೌಡ ಔಟ್ – ಎಂ.ಕೃಷ್ಣಾರೆಡ್ಡಿಗೆ ಮಣೆ ಹಾಕಿದ ಜೆಡಿಎಸ್ ವರಿಷ್ಠರು

ನಮ್ಮ ಕಾರ್ಯಕರ್ತರು, ಬ್ಲಾಕ್, ಜಿಲ್ಲಾಧ್ಯಕ್ಷರು ಹಾಗೂ ಪಕ್ಷದ ವಿವಿಧ ಘಟಕಗಳ ಪರಿಶ್ರಮದಿಂದ ಸಂಗ್ರಹಿಸಲಾದ ಸಹಿಗಳನ್ನು ಸಲ್ಲಿಕೆ ಮಾಡಿದ್ದೇವೆ. ನಾವು ನಮ್ಮ ಕರ್ತವ್ಯ ಮಾಡಿದ್ದು, ಮೊನ್ನೆಯಷ್ಟೇ ನಾನು ಹಾಗೂ ಸಿಎಂ ಈ ವಿಚಾರವಾಗಿ ಮಾಧ್ಯಮಗೋಷ್ಠಿ ನಡೆಸಿದ್ದೇವೆ. ನಮ್ಮ ಕಾರ್ಯಕರ್ತರು ಈ ಅಭಿಯಾನವನ್ನು ಇನ್ನೂ ಮುಂದುವರಿಸುತ್ತಿದ್ದು, ನಂತರ ಸಂಗ್ರಹಿಸುವ ಸಹಿ ದಾಖಲೆಗಳನ್ನು ಮುಂದಿನ ದಿನಗಳಲ್ಲಿ ಸಲ್ಲಿಕೆ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಬಿಂದಾಸ್ ಲೈಫ್ – ಕಾಂಗ್ರೆಸ್‌ನ ಹೊಸ ಗ್ಯಾರಂಟಿ ಎಂದು ಕುಟುಕಿದ ಶೆಹಜಾದ್ ಪೂನಾವಾಲಾ

DK Shivakumar 2 2

ಮತಗಳ್ಳತನ ಖಂಡಿತವಾಗಿ ಆಗಿದೆ. ಬಿಹಾರದಲ್ಲಿ ಎಸ್‌ಐಆರ್ ನಡೆದಾಗ ನ್ಯಾಯಾಲಯ ಮಧ್ಯಪ್ರವೇಶ ಮಾಡಿ ಏಕೆ ಸೂಚನೆ ನೀಡಿತು? ರಾಹುಲ್ ಗಾಂಧಿ ಅವರು ಇದರ ಬಗ್ಗೆ ಮೊದಲ ಪತ್ರಿಕಾಗೋಷ್ಠಿ ನಡೆಸಿದ ನಂತರ ಮಾಧ್ಯಮಗಳು ಬೆಂಗಳೂರಿಗೆ ಬಂದು ಉಲ್ಲೇಖಿತ ಮನೆಗಳ ಸಂಖ್ಯೆ ಸೇರಿದಂತೆ ಯಾವ, ಯಾವ ಕಡೆ ಅಕ್ರಮ ನಡೆದಿದೆ ಎಂದು ಫ್ಯಾಕ್ಟ್ ಚೆಕ್ ಮಾಡಿದವು. ಯಾವ ಸರ್ಕಾರವೂ ಅದರ ವೈಫಲ್ಯ ಒಪ್ಪಿಕೊಳ್ಳುವುದಿಲ್ಲ. ವಿರೋಧ ಪಕ್ಷದ ಕೆಲಸವೇ ವೈಫಲ್ಯಗಳನ್ನು ಕಂಡುಹಿಡಿದು ತಿಳಿಸುವುದು ಎಂದರು. ಇದನ್ನೂ ಓದಿ: ʻವೈಟ್ ಕಾಲರ್ ಉಗ್ರರ ಜಾಲʼದಲ್ಲಿ ವಿದ್ಯಾರ್ಥಿಗಳೂ ಭಾಗಿ – IED ತಯಾರಿಸುವ 2,900 Kg ಸ್ಫೋಟಕ ಪತ್ತೆ, 7 ಉಗ್ರರು ಅರೆಸ್ಟ್‌!

ಕುಮಾರಸ್ವಾಮಿ ಅವರೂ ಭಯೋತ್ಪಾದಕರ ಒಂದು ಭಾಗವೇ?
ವಿಧಾನಸೌಧದಲ್ಲಿ ಭಯೋತ್ಪಾದಕರಿದ್ದಾರೆ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರೂ ಸಹ ಭಯೋತ್ಪಾದಕರ ಭಾಗವಾಗಿದ್ದಾರೆಯೇ? ಅವರೂ ಸಹ ವಿಧಾನಸೌಧದಲ್ಲಿ ಕುಳಿತಿರಲಿಲ್ಲವೇ? ಅವರಿಗೂ ಹಾಗೂ ಅವರ ಪಕ್ಷದವರಿಗೂ, ಅವರ ಆಡಳಿತಕ್ಕೂ ಇದು ಅನ್ವಯಿಸುತ್ತದೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಅಮೆರಿಕದ ಜನತೆಗೆ 1.77 ಲಕ್ಷ ರೂ. ಡಿವಿಡೆಂಡ್‌ : ಟ್ರಂಪ್‌ ಘೋಷಣೆ

ಸಂವಿಧಾನಿಕ ಸಂಸ್ಥೆಗಳ ದುರುಪಯೋಗ:
ಚುನಾವಣಾ ಆಯೋಗವು ಬಿಹಾರದ ಮತದಾರರಿಗೆ ಸರಿಯಾದ ನ್ಯಾಯ ಒದಗಿಸಿಲ್ಲ. ಬಿಜೆಪಿ ಸಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡಿದೆ. ಯಾವುದು ಕಾಡದಿದ್ದರೂ ಆತ್ಮಸಾಕ್ಷಿ ಎನ್ನುವುದು ಇದ್ದೇ ಇರುತ್ತದೆ. ಅದು ಅಂತಿಮವಾಗಿ ಕೆಲಸ ಮಾಡಲಿದೆ ಎಂದು ಹೇಳಿದರು. ಇದನ್ನೂ ಓದಿ: ಬಿಹಾರ | 30 ವರ್ಷಗಳ ಹಿಂದೆ ನಿರ್ಮಿಸಿದ್ದ ಮನೆಯ ಛಾವಣಿ ಕುಸಿತ – ಒಂದೇ ಕುಟುಂಬದ ಐವರು ಸಾವು

ಮುಖ್ಯಮಂತ್ರಿ ಹುದ್ದೆ ಬದಲಾವಣೆ ಬಗೆಗಿನ ಊಹಾಪೋಹಗಳ ಬಗ್ಗೆ ಕೇಳಿದಾಗ, ನಾನು ರಾಜಕೀಯ ವಿಚಾರಗಳನ್ನು ಮಾತನಾಡುವುದಿಲ್ಲ. ನಾನು ಪ್ರಜಾಪ್ರಭುತ್ವ, ಮತದಾನದ ಹಕ್ಕು, ಸಂವಿಧಾನವನ್ನು ಉಳಿಸುವ ವಿಚಾರವಾಗಿ ಮಾತನಾಡುತ್ತೇನೆ ಎಂದು ಉತ್ತರಿಸಿದರು. ಇದನ್ನೂ ಓದಿ:  ಸರ್ಕಾರ ನಿಗದಿ ಮಾಡಿದ ದರ ನೀಡಬೇಕು – ಕಬ್ಬು ಬೆಳೆಗಾರರಿಂದ ನಾಳೆ ಹೈವೇ ಬಂದ್ ಎಚ್ಚರಿಕೆ

TAGGED:DK Shivakumarelection commissionhd kumaraswamyNew DelhiVote ChoriVote Theftಕರ್ನಾಟಕಕಾಂಗ್ರೆಸ್ಚುನಾವಣಾ ಆಯೋಗಡಿಕೆ ಶಿವಕುಮಾರ್ನವದೆಹಲಿಮತಗಳ್ಳತನಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Ranveer Singh
ರಿಷಬ್ ಅದ್ಭುತ ಅಭಿನಯ ತೋರಿಸೋದು ಉದ್ದೇಶವಾಗಿತ್ತು, ನೋವಾಗಿದ್ದರೆ ಕ್ಷಮಿಸಿ – ರಣವೀರ್ ಸಿಂಗ್
Bollywood Cinema Latest Sandalwood Top Stories
Kavya Rakshita Shetty
ಕಾವ್ಯ, ರಕ್ಷಿತಾ ಮಧ್ಯೆ ಭಾರೀ ಕಿತ್ತಾಟ – ಬೆನ್ನಿಗೆ ಚೂರಿ
Cinema Karnataka Latest Top Stories TV Shows
Samantha Ruth Prabhu 2
ನಿರ್ದೇಶಕ ರಾಜ್ ನಿಡಿಮೋರು ಜೊತೆ ಹೊಸ ಜೀವನಕ್ಕೆ ಕಾಲಿಟ್ಟ ನಟಿ ಸಮಂತಾ
Cinema Latest Main Post South cinema
Darshan The Devil 1
ಡಿಬಾಸ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌ – ‘ದಿ ಡೆವಿಲ್’ ಟ್ರೈಲರ್ ರಿಲೀಸ್‌ಗೆ ಮುಹೂರ್ತ ಫಿಕ್ಸ್!
Cinema Latest Sandalwood Top Stories

You Might Also Like

KJ George
Bengaluru City

ಸ್ಮಾರ್ಟ್ ಮೀಟರ್ ಹಗರಣ ಕೇಸ್ – ಕೆ.ಜೆ ಜಾರ್ಜ್‌ಗೆ ಬಿಗ್ ರಿಲೀಫ್

Public TV
By Public TV
10 minutes ago
DK Shivakumar siddaramaiah
Bengaluru City

ಹೈಕಮಾಂಡ್‌ ಹೇಳಿದಾಗ ಡಿಕೆಶಿ ಸಿಎಂ: ಸಿದ್ದರಾಮಯ್ಯ

Public TV
By Public TV
23 minutes ago
Ramanagara Head Constable Death
Crime

Ramanagara | ಹೆಡ್ ಕಾನ್ಸ್‌ಟೇಬಲ್ ಅನುಮಾನಾಸ್ಪದ ಸಾವು – ಕೆರೆಯಲ್ಲಿ ಶವ ಪತ್ತೆ

Public TV
By Public TV
48 minutes ago
Anjanadri Hills 3
Districts

ಹನುಮಮಾಲೆ ವಿಸರ್ಜನೆಗೆ ಮಧುವಣಗಿತ್ತಿಯಂತೆ ಸಿಂಗಾರಗೊಂಡ ಅಂಜನಾದ್ರಿ ಬೆಟ್ಟ

Public TV
By Public TV
1 hour ago
BSYediyurappa 2
Bengaluru City

ಪೋಕ್ಸೋ ಕೇಸ್ – ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ BSY

Public TV
By Public TV
1 hour ago
Rameshwaram Cafe
Bengaluru City

ರಾಮೇಶ್ವರಂ ಕೆಫೆ ಊಟದಲ್ಲಿ ಹುಳ ಪತ್ತೆ ಕೇಸ್ – ಮಾಲೀಕ, ಮ್ಯಾನೇಜರ್ ವಿರುದ್ಧ FIR

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?