ಬೆಂಗಳೂರು: ನಗರದ (Bengaluru) ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮಳೆಯಿಂದಾಗಿ (Rain) ವಾಹನ ಸವಾರರು ಪರದಾಡಿದ್ದಾರೆ.
ಮಲ್ಲೇಶ್ವರ, ಪೀಣ್ಯ, ಜಾಲಹಳ್ಳಿ, ರಾಜಾಜಿನಗರ, ವಿಜಯನಗರ, ಯಶವಂತಪುರ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಮುಂದಿನ ಮೂರು ಗಂಟೆ ನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅಲ್ಲದೇ ನಗರದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮಳೆ – ಯಾಣ ಪ್ರವಾಸಿ ತಾಣಕ್ಕೆ ನಿರ್ಬಂಧ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ ಸೇರಿದಂತೆ ಬೆಂಗಳೂರು ಸುತ್ತಮುತ್ತಲು ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಇದರ ಜೊತೆಗೆ ವಿಜಯನಗರ, ಬಳ್ಳಾರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂ.ದಕ್ಷಿಣ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಬಾಗಲಕೋಟೆ ಮತ್ತು ಬೆಳಗಾವಿ ಸೇರಿ ಉತ್ತರ ಕರ್ನಾಟಕದ ಭಾಗಗಳಲ್ಲಿ ಜೂ.13ರಿಂದ ಜೂ.15ರ ವರೆಗೆ ಹಗುರ ಮಳೆಯಾಗಲಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಕೆಆರ್‌ಎಸ್ ಹಿನ್ನೀರಿನಲ್ಲಿ ಮುಳುಗಿದ್ದ ದೇವಸ್ಥಾನ ಗೋಚರ – ಫೋಟೋಶೂಟ್‌ಗೆ ಮುಗಿಬಿದ್ದ ಸೆಲೆಬ್ರಿಟಿ, ಜನರು
