ರಾಜ್ಯದಲ್ಲಿ ಮುಂದಿನ ಎರಡು ದಿನ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಉತ್ತರ ಒಳನಾಡಿಗೆ ಭಾರಿ ಮಳೆ ಅಲರ್ಟ್ ನೀಡಿದ್ದು, ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಗೆ ನಾಳೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮಳೆಯ ಜೊತೆ ಮಿಂಚು ಗುಡುಗಿನ ಎಚ್ಚರಿಕೆ ನೀಡಿದೆ. ಕರಾವಳಿಯಲ್ಲಿ ಗಾಳಿ ವೇಗ ಹೆಚ್ಚಾಗಿರುವ ಸಾಧ್ಯತೆ ಹಿನ್ನೆಲೆ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಸಂಜೆ ಬಳಿಕ ಅಥವಾ ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ವರದಿ ತಿಳಿಸಿದೆ.
- Advertisement 2
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
- Advertisement 3
- Advertisement 4
ನಗರಗಳ ಹವಾಮಾನ ವರದಿ:
ಬೆಂಗಳೂರು: 28-20
ಮಂಗಳೂರು: 28-25
ಶಿವಮೊಗ್ಗ: 27-22
ಬೆಳಗಾವಿ: 24-20
ಮೈಸೂರು: 29-21
ಮಂಡ್ಯ: 30-21
ಮಡಿಕೇರಿ: 22-17
ರಾಮನಗರ: 30-21
ಹಾಸನ: 26-19
ಚಾಮರಾಜನಗರ: 29-21
ಚಿಕ್ಕಬಳ್ಳಾಪುರ: 28-19
ಕೋಲಾರ: 29-21
ತುಮಕೂರು: 29-21
ಉಡುಪಿ: 29-24
ಕಾರವಾರ: 28-25
ಚಿಕ್ಕಮಗಳೂರು: 23-18
ದಾವಣಗೆರೆ: 28-22
ಹುಬ್ಬಳ್ಳಿ: 26-21
ಚಿತ್ರದುರ್ಗ: 28-21
ಹಾವೇರಿ: 27-22
ಬಳ್ಳಾರಿ: 31-23
ಗದಗ: 27-21
ಕೊಪ್ಪಳ: 29-22
ರಾಯಚೂರು: 31-23
ಯಾದಗಿರಿ: 31-24
ವಿಜಯಪುರ: 28-22
ಬೀದರ್: 28-22
ಕಲಬುರಗಿ: 29-23
ಬಾಗಲಕೋಟೆ: 28-22
Web Stories