ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಇಂದು ಸಹ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಕರ್ನಾಟಕದ ಭಾಗಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳ ಮೇಲೆ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 27-24
ಶಿವಮೊಗ್ಗ: 26-21
ಬೆಳಗಾವಿ: 24-21
ಮೈಸೂರು: 27-21
Advertisement
ಮಂಡ್ಯ: 28-21
ಮಡಿಕೇರಿ: 20-17
ರಾಮನಗರ: 28-21
ಹಾಸನ: 24-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 26-20
ಕೋಲಾರ: 28-21
ತುಮಕೂರು: 27-21
ಉಡುಪಿ: 27-24
ಕಾರವಾರ: 27-24
ಚಿಕ್ಕಮಗಳೂರು: 22-18
ದಾವಣಗೆರೆ: 26-21
ಹುಬ್ಬಳ್ಳಿ: 25-21
ಚಿತ್ರದುರ್ಗ: 25-21
ಹಾವೇರಿ: 26-22
ಬಳ್ಳಾರಿ: 27-23
ಗದಗ: 25-21
ಕೊಪ್ಪಳ: 26-22
ರಾಯಚೂರು: 25-22
ಯಾದಗಿರಿ: 24-23
ವಿಜಯಪುರ: 25-22
ಬೀದರ್: 23-21
ಕಲಬುರಗಿ: 24-22
ಬಾಗಲಕೋಟೆ: 26-22