ಕರಾವಳಿ ಜಿಲ್ಲೆಗಳಿಗೆ ಮುಂದಿನ ಐದು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆ ಹಿನ್ನಲೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಳೆದ ಒಂದು ವಾರದಿಂದ ಎಡೆಬಿಡದೇ ಮಳೆ ಸುರಿಯುತ್ತಿದ್ದು, ಇನ್ನೂ ಒಂದು ವಾರ ಮಳೆ ಮುಂದುವರಿಯಲಿದೆ.
Advertisement
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಮುಂದಿನ ಮೂರು ದಿನ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಂಗಳೂರು, ಕೊಡಗು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ.
Advertisement
Advertisement
ಪಶ್ಚಿಮ ಘಟ್ಟದ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಮತ್ತು ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿಯಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದ್ದು, ಬೆಂಗಳೂರಿನಲ್ಲಿ ಇಡೀ ದಿನ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ವೇಳೆ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಳೆ ತಿಳಿಸಿದೆ.
Advertisement
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 24-19
ಮಂಗಳೂರು: 27-24
ಶಿವಮೊಗ್ಗ: 24-21
ಬೆಳಗಾವಿ: 23-21
ಮೈಸೂರು: 24-20
ಮಂಡ್ಯ: 26-21
ಕೊಡಗು: 20-17
ರಾಮನಗರ: 26-20
ಹಾಸನ: 22-19
ಚಾಮರಾಜನಗರ: 25-21
ಚಿಕ್ಕಬಳ್ಳಾಪುರ: 24-20
ಕೋಲಾರ: 26-21
ತುಮಕೂರು: 24-20
ಉಡುಪಿ: 27-24
ಕಾರವಾರ: 27-25
ಚಿಕ್ಕಮಗಳೂರು: 21-18
ದಾವಣಗೆರೆ: 25-21
ಚಿತ್ರದುರ್ಗ: 24-21
ಹಾವೇರಿ: 25-22
ಬಳ್ಳಾರಿ: 28-23
ಗದಗ: 26-21
ಕೊಪ್ಪಳ: 27-23
ರಾಯಚೂರು: 30-24
ಯಾದಗಿರಿ: 29-23
ವಿಜಯಪುರ: 27-22
ಬೀದರ್: 26-21
ಕಲಬುರಗಿ: 28-23
ಬಾಗಲಕೋಟೆ: 28-23