DistrictsKarnatakaLatestMain Post

ರಾಜ್ಯದ ಹವಾಮಾನ ವರದಿ: 06-05-2022

ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಭಾರೀ ಮಳೆ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ಮೇಲ್ಮೈ ಸುಂಟರಗಾಳಿಯಿಂದಾಗಿ ರಾಜ್ಯದೆಲ್ಲೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.

bengaluru weather

ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಕರ್ನಾಟಕದ ಹಲವೆಡೆ ಇನ್ನೂ 4 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 4 ದಿನಗಳ ಕಾಲ ಬೆಂಗಳೂರು, ಕರಾವಳಿ, ಮಲೆನಾಡಿನಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ.

RAIN - BENGALURU

ಬೆಂಗಳೂರಿನಲ್ಲಿ ಮೇ 9ರವರೆಗೆ ಮಳೆಯಾಗಲಿದ್ದು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ.

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 33-21
ಮಂಗಳೂರು: 32-26
ಶಿವಮೊಗ್ಗ: 36-23
ಬೆಳಗಾವಿ: 37-21
ಮೈಸೂರು: 34-22
ಮಂಡ್ಯ: 34-22

ಕೊಡಗು: 28-19
ರಾಮನಗರ: 34-22
ಹಾಸನ: 31-21
ಚಾಮರಾಜನಗರ: 33-22
ಚಿಕ್ಕಬಳ್ಳಾಪುರ: 34-22
ಕೋಲಾರ: 34-22

ತುಮಕೂರು: 34-22
ಉಡುಪಿ: 33-27
ಕಾರವಾರ: 34-28
ಚಿಕ್ಕಮಗಳೂರು: 31-20
ದಾವಣಗೆರೆ: 37-23

ಚಿತ್ರದುರ್ಗ: 35-22
ಹಾವೇರಿ: 37-23
ಬಳ್ಳಾರಿ: 39-26
ಗದಗ: 38-23
ಕೊಪ್ಪಳ: 38-24
ರಾಯಚೂರು: 40-27

Weather

 

ಯಾದಗಿರಿ: 40-27
ವಿಜಯಪುರ: 39-27
ಬೀದರ್: 39-27
ಕಲಬುರಗಿ: 40-28
ಬಾಗಲಕೋಟೆ: 39-26

Leave a Reply

Your email address will not be published.

Back to top button