ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ 10ರವರೆಗೂ ಬೆಂಗಳೂರಿನಲ್ಲಿ ಚಳಿಯ ವಾತಾವರಣ ಮುಂದುವರೆಯಲಿದೆ.
Advertisement
ಚಿಕ್ಕಮಗಳೂರು, ಮೈಸೂರು ಚಾಮರಾಜನಗರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
Advertisement
Advertisement
ಬೆಂಗಳೂರಿನಲ್ಲಿ ಇಂದು ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 27-19
ಮಂಗಳೂರು: 28-24
ಶಿವಮೊಗ್ಗ: 28-21
ಬೆಳಗಾವಿ: 27-20
ಮೈಸೂರು: 28-19
ಮಂಡ್ಯ: 30-20
ಮಡಿಕೇರಿ: 23-16
ರಾಮನಗರ: 28-19
ಹಾಸನ: 27-18
ಚಾಮರಾಜನಗರ: 29-20
ಚಿಕ್ಕಬಳ್ಳಾಪುರ: 24-18
ಕೋಲಾರ: 27-20
ತುಮಕೂರು: 27-19
ಉಡುಪಿ: 28-24
ಕಾರವಾರ: 29-24
ಚಿಕ್ಕಮಗಳೂರು: 26-18
ದಾವಣಗೆರೆ: 29-21
ಚಿತ್ರದುರ್ಗ: 28-20
ಹಾವೇರಿ: 29-21
ಬಳ್ಳಾರಿ: 28-22
ಗದಗ: 29-21
ಕೊಪ್ಪಳ: 29-22
ರಾಯಚೂರು: 28-23
ಯಾದಗಿರಿ: 28-23
ವಿಜಯಪುರ: 29-22
ಬೀದರ್: 25-21
ಕಲಬುರಗಿ: 28-22
ಬಾಗಲಕೋಟೆ: 30-22