ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇನ್ನೂ ಒಂದೆರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ಮೇಲ್ಮೈ ಸುಂಟರಗಾಳಿಯಿಂದಾಗಿ ರಾಜ್ಯದೆಲ್ಲೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.
Advertisement
ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಕರ್ನಾಟಕದ ಹಲವೆಡೆ ಇನ್ನೂ 3 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 3 ದಿನಗಳ ಕಾಲ ಬೆಂಗಳೂರು, ಕರಾವಳಿ, ಮಲೆನಾಡಿನಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ.
Advertisement
Advertisement
ಬೆಂಗಳೂರಿನಲ್ಲಿ ಮೇ 9ರವರೆಗೆ ಮಳೆಯಾಗಲಿದ್ದು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು, ಯಾದಗಿರಿ, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 41 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 33-21
ಮಂಗಳೂರು: 33-26
ಶಿವಮೊಗ್ಗ: 36-23
ಬೆಳಗಾವಿ: 37-22
ಮೈಸೂರು: 34-22
ಮಂಡ್ಯ: 34-22
ಕೊಡಗು: 29-19
ರಾಮನಗರ: 34-22
ಹಾಸನ: 32-21
ಚಾಮರಾಜನಗರ: 33-22
ಚಿಕ್ಕಬಳ್ಳಾಪುರ: 34-22
ಕೋಲಾರ: 34-22
ತುಮಕೂರು: 34-21
ಉಡುಪಿ: 34-27
ಕಾರವಾರ: 34-27
ಚಿಕ್ಕಮಗಳೂರು: 32-19
ದಾವಣಗೆರೆ: 37-23
ಚಿತ್ರದುರ್ಗ: 36-23
ಹಾವೇರಿ: 37-23
ಬಳ್ಳಾರಿ: 39-26
ಗದಗ: 38-24
ಕೊಪ್ಪಳ: 38-25
ರಾಯಚೂರು: 41-28
ಯಾದಗಿರಿ: 41-28
ವಿಜಯಪುರ: 41-28
ಬೀದರ್: 39-27
ಕಲಬುರಗಿ: 41-28
ಬಾಗಲಕೋಟೆ: 41-27
,