ರಾಜ್ಯದಲ್ಲಿ ಮುಂಗಾರು ಮಳೆ ಮುಂದುವರಿದಿದ್ದು ಇಂದು ರಾಜ್ಯದ ವಿವಿಧ ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಕರಾವಳಿ ತೀರದ ಹಲವೆಡೆ ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ತಂಪಾದ ವಾತಾವರಣವಿರಲಿದ್ದು, ನಿಯಮಿತವಾಗಿ ಸಾಧಾರಣ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗಾಳಿ ಸಹಿತ ಲಘುವಿನಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ ಮತ್ತು ತುಮಕೂರು ಭಾಗಗಳಲ್ಲಿ ಮುಖ್ಯವಾಗಿ ಮೋಡಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಸಾಧಾರಣ ಮಳೆಯಾಗಬಹುದು.
ಬೆಂಗಳೂರು: 29-22
ಮಂಗಳೂರು: 28-24
ಶಿವಮೊಗ್ಗ: 26-22
ಬೆಳಗಾವಿ: 26-21
ಮೈಸೂರು: 29-21
ಮಂಡ್ಯ: 29-21
ಮಡಿಕೇರಿ: 22-19
ರಾಮನಗರ: 29-21
ಹಾಸನ: 25-20
ಚಾಮರಾಜನಗರ: 30-22
ಚಿಕ್ಕಬಳ್ಳಾಪುರ: 28-20

ಕೋಲಾರ: 29-21
ತುಮಕೂರು: 28-21
ಉಡುಪಿ: 29-24
ಕಾರವಾರ: 28-25
ಚಿಕ್ಕಮಗಳೂರು: 22-18
ದಾವಣಗೆರೆ: 29-22
ಹುಬ್ಬಳ್ಳಿ: 27-22
ಚಿತ್ರದುರ್ಗ: 28-21
ಹಾವೇರಿ: 28-22
ಬಳ್ಳಾರಿ: 32-24
ಗದಗ: 29-22
ಕೊಪ್ಪಳ: 31-23
ರಾಯಚೂರು: 33-24
ಯಾದಗಿರಿ: 33-25
ವಿಜಯಪುರ: 31-23
ಕಲಬುರಗಿ: 32-24
ಬಾಗಲಕೋಟೆ: 31-23

