ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 16 ರವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದ್ದು ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಜಾರಿ ಮಾಡಿದೆ.
ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಂಭವವಿದೆ.
ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಯಾದಗಿರಿಯಲ್ಲಿ ಗರಿಷ್ಠ 34 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 28-24
ಶಿವಮೊಗ್ಗ: 27-22
ಬೆಳಗಾವಿ: 26-21
ಮೈಸೂರು: 28-21
ಮಂಡ್ಯ: 29-21
ಮಡಿಕೇರಿ: 21-17
ರಾಮನಗರ: 28-21
ಹಾಸನ: 25-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 26-19
ಕೋಲಾರ: 28-21
ತುಮಕೂರು: 27-21
ಉಡುಪಿ: 28-24
ಕಾರವಾರ: 28-25
ಚಿಕ್ಕಮಗಳೂರು: 24-19
ದಾವಣಗೆರೆ: 28-22
ಹುಬ್ಬಳ್ಳಿ: 27-21
ಚಿತ್ರದುರ್ಗ: 27-21
ಹಾವೇರಿ: 28-22
ಬಳ್ಳಾರಿ: 32-23
ಗದಗ: 29-22
ಕೊಪ್ಪಳ: 30-23
ರಾಯಚೂರು: 33-24
ಯಾದಗಿರಿ: 34-24
ವಿಜಯಪುರ: 31-22
ಬೀದರ್: 32-23
ಕಲಬುರಗಿ: 33-24
ಬಾಗಲಕೋಟೆ: 31-23
Web Stories