ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯ ವಾತಾವರಣ ಮುಂದುವರಿಯಲಿದೆ. ಕರಾವಳಿ ಸೇರಿದಂತೆ ರಾಜ್ಯದ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ಉತ್ತರ ಒಳನಾಡಿಗೆ ಎರಡು ದಿನ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲ್ಬುರ್ಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ದಾವಣಗೆರೆ, ಕೊಡಗು, ಮಂಡ್ಯ, ಶಿವಮೊಗ್ಗ, ಕೋಲಾರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಅಲ್ಲಿಯೂ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 26-19
ಮಂಗಳೂರು: 29-24
ಶಿವಮೊಗ್ಗ: 28-21
ಬೆಳಗಾವಿ: 26-20
ಮೈಸೂರು: 28-20
ಮಂಡ್ಯ: 28-21
ಮಡಿಕೇರಿ: 23-16
ರಾಮನಗರ: 26-18
ಹಾಸನ: 27-19
ಚಾಮರಾಜನಗರ: 28-20
ಚಿಕ್ಕಬಳ್ಳಾಪುರ: 26-19
ಕೋಲಾರ: 27-20
ತುಮಕೂರು: 27-20
ಉಡುಪಿ: 29-24
ಕಾರವಾರ: 28-24
ಚಿಕ್ಕಮಗಳೂರು: 26-18
ದಾವಣಗೆರೆ: 28-21
ಚಿತ್ರದುರ್ಗ: 28-21
ಹಾವೇರಿ: 27-21
ಬಳ್ಳಾರಿ: 29-22
ಗದಗ: 27-21
ಕೊಪ್ಪಳ: 28-22
ರಾಯಚೂರು: 29-23
ಯಾದಗಿರಿ: 29-23
ವಿಜಯಪುರ: 27-22
ಬೀದರ್: 27-21
ಕಲಬುರಗಿ: 28-22
ಬಾಗಲಕೋಟೆ: 28-22