ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು, ಮೂರು ದಿನಗಳ ಕಾಲ ಮಳೆಯಾಗಲಿದೆ. ಈಗಾಗಲೇ ರಾಜ್ಯದ 19 ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಉಳಿದ ಕೆಲ ಜಿಲ್ಲೆಗಳಲ್ಲಿ ಮುಂಜಾನೆ ಮೋಡ ಕವಿದ ವಾತಾವರಣದಿಂದ ಕೂಡಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಬೆಂಗಳೂರು, ಮೈಸೂರು, ಮಂಡ್ಯ, ಮಡಿಕೇರಿ, ರಾಮನಗರ, ಹಾಸನ, ಚಾಮರಾಜನಗರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಂಜೆ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಕೊಪ್ಪಳ, ಯಾದಗಿರಿ, ಕಲಬುರಗಿ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಬೆಳಗ್ಗೆ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಂಗಳೂರು ಮತ್ತು ಉಡುಪಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 27-19
ಮಂಗಳೂರು: 30-24
ಶಿವಮೊಗ್ಗ: 29-21
ಬೆಳಗಾವಿ: 28-21
ಮೈಸೂರು: 28-21
ಮಂಡ್ಯ: 29-21
ಮಡಿಕೇರಿ: 24-17
ರಾಮನಗರ: 29-21
ಹಾಸನ: 27-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 26-19
ಕೋಲಾರ: 27-20
ತುಮಕೂರು: 28-21
ಉಡುಪಿ: 30-24
ಕಾರವಾರ: 31-25
ಚಿಕ್ಕಮಗಳೂರು: 26-19
ದಾವಣಗೆರೆ: 28-21
ಚಿತ್ರದುರ್ಗ: 28-21
ಹಾವೇರಿ: 29-22
ಬಳ್ಳಾರಿ: 29-23
ಗದಗ: 29-22
ಕೊಪ್ಪಳ: 29-22
ರಾಯಚೂರು: 29-23
ಯಾದಗಿರಿ: 30-23
ವಿಜಯಪುರ: 29-22
ಬೀದರ್: 27-21
ಕಲಬುರಗಿ: 30-22
ಬಾಗಲಕೋಟೆ: 29-22