ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೂ.22 ರ ವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಮಲೆನಾಡು ಭಾಗಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಭಾಗಗಳಲ್ಲಿ ಬಿರುಗಾಳಿ ಸಹಿತ ಮಹಿಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಅವಧಿಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರಲ್ಲಿ ಮೋಡ ಮುಸುಕಿದ ವಾತಾವರಣ ಇದೆ. ಸಂಜೆ ಹೊತ್ತಲ್ಲಿ ಸಣ್ಣ ಪ್ರಮಾಣದ ಮಳೆಯಾಗುತ್ತಿದೆ. ಇದು ಮುಂದಿನ ಒಂದು ವಾರದ ವರೆಗೂ ಹಾಗೆಯೇ ಮುಂದುವರಿಯುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಸೇರಿ ಕೆಲವು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ ಸೇರಿ ಹಲವೆಡೆ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 31-22
ಮಂಗಳೂರು: 32-26
ಶಿವಮೊಗ್ಗ: 31-23
ಬೆಳಗಾವಿ: 31-22
ಮೈಸೂರು: 31-22
ಮಂಡ್ಯ: 32-23
ಮಡಿಕೇರಿ: 27-21
ರಾಮನಗರ: 32-22
ಹಾಸನ: 29-21
ಚಾಮರಾಜನಗರ: 31-23
ಚಿಕ್ಕಬಳ್ಳಾಪುರ: 31-22
ಕೋಲಾರ: 32-23
ತುಮಕೂರು: 31-22
ಉಡುಪಿ: 32-26
ಕಾರವಾರ: 31-28
ಚಿಕ್ಕಮಗಳೂರು: 26-19
ದಾವಣಗೆರೆ: 33-24
ಹುಬ್ಬಳ್ಳಿ: 32-23
ಚಿತ್ರದುರ್ಗ: 32-23
ಹಾವೇರಿ: 32-23
ಬಳ್ಳಾರಿ: 36-26
ಗದಗ: 33-23
ಕೊಪ್ಪಳ: 35-24
ರಾಯಚೂರು: 37-28
ಯಾದಗಿರಿ: 37-27
ವಿಜಯಪುರ: 37-26
ಕಲಬುರಗಿ: 37-27
ಬಾಗಲಕೋಟೆ: 36-24
